ರಾಯಚೂರು-ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಹೊರವಲಯದ ಸತ್ಯ ಗಾರ್ಡನ್ ಬಳಿ ಅನುಮಾನಾಸ್ಪದ ರೀತಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ.. ಇನ್ನು ಈ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.. ಮಾಹಿತಿ ಮೇರೆಗೆ ಸ್ಥಳಕ್ಕೆ DYSP ಬಿ.ಎಸ್.ತಳವಾರ ಹಾಗೂ PI ದುರಗಪ್ಪ ಬೇಟಿ ನೀಡಿ, ಸ್ಥಳ ಪರಿಶೀಲನೆ ಮಾಡಿ ಮೃತ ಶವವನ್ನು ರಿಮ್ಸ್ ಆಸ್ಪತ್ರೆಗೆ ಸಾಗಿಸಿದ್ದಾರೆ.. ಇನ್ನು ಮಗು ಮೃತಪಟ್ಟು 4 ರಿಂದ 5 ದಿನವಾಗಿರಬಹುದು ಎಂದು ಹೇಳಲಾಗುತ್ತಿದೆ.ಅಂದಾಜು ಏಳರಿಂದ ಎಂಟು ವಯಸ್ಸು ಇರಬಹುದು ಎಂದು ಅಂದಾಜಿಸಲಾಗಿದೆ.