ಮಡಿಕೇರಿ: ವೈದ್ಯ ದಂಪತಿ ಅಪ್ರಾಪ್ತ ಬಾಲಕಿಗೆ ಹೆರಿಗೆ ಮಾಡಿಸಿ ಮಗುವನ್ನು ಹಣಕ್ಕಾಗಿ ಮಾರಾಟ ಮಾಡುವುದರ ಮೂಲಕ ವೈದ್ಯ ವೃತ್ತಿಗೆ ಕಳಂಕ ತರುವಂತಹ ಕೆಲಸ ಮಾಡಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಡಾ.ರಾಜೇಶ್ವರಿ ಹಾಗೂ ಡಾ.ನವೀನ್ ಆರೋಪಿಗಳಾಗಿದ್ದು, ಇವರು ಮಡಿಕೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದರು. ಆದರೆ ಹೆರಿಗೆಗೆಂದು ಸರ್ಕಾರಿ ಆಸ್ಪತ್ರೆಗೆ ಬಂದ ಅಪ್ರಾಪ್ತೆಯನ್ನು ಮಡಿಕೇರಿಯ ಇನ್ನೊಂದು ಆಸ್ಪತ್ರೆಗೆ ಕರೆದೊಯ್ದು ಹೆರಿಗೆ ಮಾಡಿಸಿ ಅದೇ ಆಸ್ಪತ್ರೆಯ ನೌಕರರೊಬ್ಬರ ಮಗನಿಗೆ ಮಗುವನ್ನು 1.50ಲಕ್ಷಕ್ಕೆ ಮಾರಾಟ ಮಾಡಿ ಆ ಮಗು ಅವರಿಗೆ ಜನಿಸಿದೆ ಎಂದು ನಕಲಿ ಜನನ ಪ್ರಮಾಣ ಪತ್ರ ಸೃಷ್ಟಿಸಿದ್ದಾರೆ.
ಈ ವಿಚಾರ ತಿಳಿದ ಮಹಿಳಾ ಮತ್ತು ಮಕ್ಜಳ ಕಲ್ಯಾಣ ಇಲಾಖೆ ಮಡಿಕೇರಿಯ ನಗರ ಪೊಲೀಸ್ ಠಾಣೆಯಲ್ಲಿ ವೈದ್ಯ ದಂಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಹಿನ್ನಲೆಯಲ್ಲಿ ವೈದ್ಯ ದಂಪತಿ ನಾಪತ್ತೆಯಾಗಿದ್ದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.