ಕಬ್ಬಿಗೆ ಬೆಂಬಲ ದರ ಸೇರಿ ಹಲವು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಫ್ರೀಡಂಪಾರ್ಕ್ನಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇಂದು ಚಾಮರಾಜಪೇಟೆಯ ಪ್ರತಿಭಟನಾನಿರತ ರೈತರೊಬ್ಬರು ಮರ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ, ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು, ರಾಜ್ಯದಲ್ಲಿ ರೈತರಿಗೆ ನೀಡಬೇಕಾದ ಸವಲತ್ತುಗಳು ಸಿಗುತ್ತಿಲ್ಲ ಎಂದು ರೈತ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಇನ್ನೂ ಇದೇ ವಿಚಾರವಾಗಿ ಮಾತನಾಡಿದ ಕುರುಬೂರು ಶಾಂತಕುಮಾರ್ ಮಾತನಾಡಿ ಕಬ್ಬು ಬೆಳೆಗಾರರ ಬೇಡಿಕೆ ಈಡೇರುವವರೆಗೂ ಧರಣಿ ನಿಲ್ಲಿಸುವುದಿಲ್ಲ. ಪ್ರತಿದಿನ ಒಂದೊಂದು ಜಿಲ್ಲೆಯ ಕಬ್ಬು ಬೆಳೆಗಾರರು ಧರಣಿಯಲ್ಲಿ ಪಾಲ್ಗೊಳ್ಳುವರು ಎಂದರು. ಕಬ್ಬು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಅವರ ನೆರವಿಗೆ ಧಾವಿಸಬೇಕು. ಎಫ್ಆರ್ಪಿ ದರವನ್ನು ಏರಿಸಲೇಬೇಕು ಎಂದು ಅವರು ಒತ್ತಾಯಿಸಿದರು