Publish Date: Tue, 16 Jan 2024 (15:42 IST)
Updated Date: Tue, 16 Jan 2024 (13:15 IST)
ಬೆಂಗಳೂರು-ಆರ್.ಟಿ.ನಗರದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಎರಡನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಆಗಿಲ್ಲ .ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.ಮನೆಯಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳನ್ನ ರಕ್ಷಣೆ ಮಾಡಲಾಗಿದೆ.ತೌಸಿಫ್ ಎಂಬುವವರಿಗೆ ಸೇರಿದ ಮನೆಯಾಗಿದ್ದು,ವಾಷಿಂಗ್ ಮಷಿನ್,ಟಿವಿ,ಫ್ರಿಡ್ಜ್ ಸೇರಿ ಮನೆಯಲ್ಲಿದ್ದ ಎಲ್ಲ ವಸ್ತು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.