ಮುಂಬೈ : ವಿಮಾನದಲ್ಲಿ ಮಹಿಳಾ ಸಿಬ್ಬಂದಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಬೆಂಗಳೂರು ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಮುಂಬೈನಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದ ಇಂಡಿಗೋ ವಿಮಾನದಲ್ಲಿ ಬೆಂಗಳೂರು ಮೂಲದ 28 ವರ್ಷದ ರಾಜು ಗಂಗಪ್ಪ ಎಂಬ ಪ್ರಯಾಣಿಕ 20 ವರ್ಷದ ವಿಮಾನಯಾನ ಮಹಿಳಾ ಸಿಬ್ಬಂದಿ ಜತೆ ಅಸಭ್ಯವಾಗಿ ವರ್ತಸಿದ್ದಾನೆ.
ಈ ವಿಚಾರದ ಬಗ್ಗೆ ಮಹಿಳಾ ಸಿಬ್ಬಂದಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅದರ ಅನ್ವಯ ದೂರು ದಾಖಲು ಮಾಡಿಕೊಂಡು ಅವರು ಆತನನ್ನು ಬಂಧಿಸಿ ಪೊಲೀಸರ ವಶಕ್ಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.