ಹಾಸನದ ಮಹಿಳಾ ಪೊಲೀಸ್ ಠಾಣೆಗೆಯಲ್ಲೇ ಪತ್ನಿಯ ಕತ್ತು ಕೊಯ್ದು ಪತಿ ಕೊಲೆ ಮಾಡಲು ಯತ್ನಿಸಿದ್ದಾನೆ. ಶಿಲ್ಪ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹರೀಶ್ ಕೊಲೆ ಮಾಡಲು ಯತ್ನಿಸಿದ ಪತಿ. ಹರೀಶ್ ಮತ್ತು ಶಿಲ್ಪ ಮದುವೆಯಾಗಿ 6 ವರ್ಷಗಳಾಗಿದ್ದು, ಒಬ್ಬರ ಮೇಲೆ ಒಬ್ಬರು ಅನುಮಾನಪಟ್ಟು ಜಗಳವಾಡಿ ಠಾಣೆಯ ಮೆಟ್ಟಿಲೇರಿದ್ದಾರೆ.
ಗಂಡ ನನಗೆ ಕಿರುಕುಳ ನೀಡುತ್ತಿದ್ದಾನೆಂದು ಶಿಲ್ಪ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಪತಿ ಹರೀಶ್ನನ್ನು ಕರೆಸಿ ವಿಚಾರಣೆ ನಡೆಸುತ್ತಿರುವಾಗ, ಕೊಲೆ ಮಾಡಲು ಯತ್ನಿಸಿದ್ದಾರೆ. ಕೂಡಲೆ ಪೊಲೀಸರು ತಡೆದಿದ್ದು, ಚಾಕು ಕಿತ್ತುಕೊಂಡು ಆರೋಪಿ ಹರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.