ಗಾಲ್ಫ್ ಮೈದಾನದಲ್ಲಿ ಪತ್ಯಕ್ಷಗೊಂಡಿದ್ದ ಚಿರತೆಯನ್ನು ಸೆರೆಹಿಡಿಯಲು ಹರಸಾಹಸ ಪಡುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಸೆರೆಹಿಡಿಯುವ ನಿರತಂತರ ಪ್ರಯತ್ನದಲ್ಲಿ ತೊಡಗಿದ್ದಾರೆ. ಇದರ ಮುಂದುವರಿದ ಭಾಗವಾಗಿ ಅರಣ್ಯ ಇಲಾಖೆಯು ಚಿರತೆಯನ್ನು ಸೆರೆಹಿಡಿಯಲು ಮಾಸ್ಟರ್ ಪ್ಲಾನ್ ಒಂದನ್ನು ಸಿದ್ಧಪಡಿಸಿದ್ದು, ಈ ಯೋಜನೆಯಂತೆ ಇಂದು ಸಿಬ್ಬಂದಿಗಳು ಚಿರತೆಯನ್ನು ಸೆರೆ ಹಿಡಿಯುವ ಪ್ರಯತ್ನದಲ್ಲಿದ್ದಾರೆ. ಕಾರ್ಯಾಚರಣೆಯಲ್ಲಿ ಇಂದು ಮತ್ತೆ 200 ಜನರು ಹೆಚ್ಚುವರಿಯಾಗಿ ಭಾಗಿಯಾಗಿದ್ದಾರೆ. ಚಿರತೆ ಪ್ರತ್ಯಕ್ಷಗೊಂಡ ಸುತ್ತಮುತ್ತಲಿನ ಪ್ರದೇಶದಲ್ಲಿನ ಜನರಲ್ಲಿ ಆಂತಕ ಹೆಚ್ಚಿಸಿದ್ದು, ಚಿರತೆಯನ್ನು ಯಾವಾಗ ಸೆರೆ ಹಿಡಿಯಲಾಗೊತ್ತೋ ಎಂಬ ಚಿಂತೆಯಲ್ಲಿದ್ದಾರೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಕೂಡ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸುಮಾರು 22 ಸರ್ಕಾರಿ, ಖಾಸಗಿ ಶಾಲೆಗಳಿಗೆ ಘೋಷಿಸಿದ್ದ ರಜೆಯನ್ನು ಮುಂದುವರಿಕೆ ಮಾಡಲಾಗಿದೆ.