ಮೈಸೂರು : ವ್ಯಕ್ತಿಯೊಬ್ಬ ಬಾಮೈದ ಮತ್ತು ಅತ್ತೆಯ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಯರಹಳ್ಳಿಯ ಮನೆಯಲ್ಲಿ ತಡರಾತ್ರಿ ನಡೆದಿದೆ.
ಕ್ಷುಲಕ ಕಾರಣಕ್ಕೆ ಜಗಳವಾಡಿದ ಈತ ಅತ್ತೆ ಹೇಮಾವತಿಯವರ 2 ಕೈಗಳನ್ನು ಕತ್ತರಿಸಿದ್ದಲ್ಲದೆ ಬಾಮೈದ ಮನು ಕುತ್ತಿಗೆ , ತಲೆ ಭಾಗಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಬಾಮೈದ ಮನು ಸಾವು ಬದುಕಿನ ನಡುವೆ ಹೋರಾಡುತ್ತಿದ್ದು, ಈ ಹಿನ್ನಲೆಯಲ್ಲಿ ನಾಳೆ ನಡೆಯಬೇಕಿದ್ದ ಮನುವಿನ ವಿವಾಹ ಸಮಾರಂಭವು ಸ್ಥಗಿತಗೊಂಡಿದೆ ಎನ್ನಲಾಗಿದೆ.
ಗಾಯಾಳು ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ, ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.