ಬೆಂಗಳೂರು :ನಡುರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೊಬ್ಬಳಿಗೆ ಕಾಮುಕನೊಬ್ಬ ಹಾಡಹಗಲೇ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬ್ರಿಗೇಡ್ ರಸ್ತೆಯ ಶೋರೂಂವೊಂದರಲ್ಲಿ ರಿಸೆಪ್ಶನಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಸಂತ್ರಸ್ತ ಯುವತಿ ಅಕ್ಟೋಬರ್ 26 ರಂದು ಮಧ್ಯಾಹ್ನ 2.30 ರ ವೇಳೆಗೆ ಊಟ ಮಾಡಲು ಸಮೀಪದ ಹೋಟೆಲ್ ಗೆ ತೆರಳಿದ್ದರು. ಮೆಗ್ರತ್ ರಸ್ತೆಯಲ್ಲಿ ನಡೆದುಕೊಂಡು ಹೋಗ್ತಿದ್ದ ಯುವತಿಗೆ ಎದುರಾಗಿದ್ದ ತಮಿಳುನಾಡು ಮೂಲದ ವ್ಯಕ್ತಿ ಆರ್ಮುಗಂ ಎಂಬಾತ ಆಕೆಯ ಮೈ ಮುಟ್ಟಲು ಯತ್ನಿಸಿ ಅಶ್ಲೀಲವಾಗಿ ವರ್ತಿಸಿದ್ದಾನೆ.
ಈ ಕಾಮುಕನ ವರ್ತನೆಯಿಂದ ಹೆದರಿದ ಯುವತಿ ಅಲ್ಲೇ ಇದ್ದ ಸಂಚಾರಿ ಪೊಲೀಸರ ಬಳಿ ತಿಳಿಸಿದ್ದಾಳೆ. ಕೂಡಲೇ ಕಾಮುಕನನ್ನು ಹಿಡಿದ ಪೊಲೀಸರು ಅಶೋಕನಗರದ ಅಪರಾಧ ವಿಭಾಗದ ಪೊಲೀಸರಿಗೆ ಒಪ್ಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.