Publish Date: Sun, 09 Jul 2023 (15:32 IST)
Updated Date: Sun, 09 Jul 2023 (15:59 IST)
ತಮಿಳುನಾಡಿನ ಕೊಯಮತ್ತೂರು ವಲಯದ ಡೆಪ್ಯೂಟಿ IGP ಹಾಗೂ ಹಿರಿಯ IPS ಅಧಿಕಾರಿಯಾಗಿದ್ದ ಸಿ. ವಿಜಯಕುಮಾರ್ ಅವರು ತಲೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ತಮಿಳುನಾಡು DGP ಶಂಕರ್ ಜೈವಾಲ್, ಕೊಯಮತ್ತೂರು IGP ಆರ್ ಸುಧಾಕರ್ ಭೇಟಿ ನೀಡಿದ್ದಾರೆ. ವಿಜಯಕುಮಾರ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅವರು ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಜೈವಾಲ್ ತಿಳಿಸಿದ್ದಾರೆ. ನಿದ್ರಾಹೀನತೆಯಿಂದ ಬಳಲುತ್ತಿದ್ದ ವಿಜಯಕುಮಾರ್ ಮಾತ್ರೆ ತೆಗೆದುಕೊಳ್ಳುತ್ತಿದ್ದರು.. ಅವರ ಆತ್ಮಹತ್ಯೆಗೆ ಕೆಲಸದ ಒತ್ತಡವೂ ಕಾರಣ ಇದೆ ಎಂದು ಹೇಳಲಾಗುತ್ತಿದೆ.. 2009 ರ ಬ್ಯಾಚ್‌ನ ತಮಿಳುನಾಡು ಕೇಡರ್‌ನ ಐಪಿಎಸ್ ಅಧಿಕಾರಿಯಾಗಿದ್ದ ವಿಜಯಕುಮಾರ್ ಅವರು ಕಡಲೂರು, ಕಾಂಚಿಪುರಂ, ತಿರುವರೂರು, ನಾಗಪಟ್ಟಿಣಂ ಜಿಲ್ಲೆಗಳ ಎಸ್‌ಪಿಯಾಗಿ ಕಾರ್ಯನಿರ್ವಹಿಸಿದ್ದರು. ವಿಜಯ್ ಕುಮಾರ್ ಸಾವಿಗೆ ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ.