Publish Date: Sat, 08 Jul 2023 (15:01 IST)
Updated Date: Sat, 08 Jul 2023 (16:10 IST)
ಸರ್ಕಾರದ ವಿರುದ್ದ ಟ್ವೀಟ್ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಜನ ಸಾಮಾನ್ಯರ ಮೇಲೆ ಬೆಲೆ ಏರಿಕೆಯ ಹೊರೆ ಹೊರಿಸಿದ್ದಾರೆ. ಬಡವರ ಕಲ್ಯಾಣವೆಂಬ ಬೊಗಳೆ ಬಿಟ್ಟ ಇವರು ಇಂದು ಬಡವನ ಬಾಳಿಗೆ ಕೊಳ್ಳಿ ಇಟ್ಟಿದ್ದಾರೆ ಅಂತ ಕಿಡಿಕಾರಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ #ATMSarkara #ಸಾಲರಾಮಯ್ಯ ಎಂದು ಟ್ಯಾಗ್ ಮಾಡಿ ಅಸಮಾಧಾನ ಹೊರ ಹಾಕಿರುವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ಬೆಲೆ ಏರಿಕೆ ಗ್ಯಾರಂಟಿ ಬಜೆಟ್ ಮಂಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬರುವ ದಿನಗಳಲ್ಲಿ ರಾಜ್ಯದ ಆರ್ಥಿಕ ವ್ಯವಸ್ಥೆಯನ್ನು ಅಧೋಗತಿಗೆ ತೆಗೆದುಕೊಂಡು ಹೋಗುವ ಎಲ್ಲ ಸೂಚನೆಗಳನ್ನು ನೀಡಿದ್ದಾರೆ ಅಂತಾ ಹರಿಹಾಯ್ದದ್ದಾರೆ.
geetha
Publish Date: Sat, 08 Jul 2023 (15:01 IST)
Updated Date: Sat, 08 Jul 2023 (16:10 IST)