ಬೆಂಗಳೂರು : ಶಾಲೆಗಳ ಆರಂಭದ ಕುರಿತು ಇಂದು ಶಿಕ್ಷಣಾ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಕೆಲವು ರಾಜ್ಯಗಳಲ್ಲಿ ಶಾಲೆಗಳು ಆರಂಭವಾಗಿದ್ದು, ರಾಜ್ಯದಲ್ಲೂ ಶಾಲಾ-ಕಾಲೇಜುಗಳನ್ನು ಆರಂಭಿಸುವ ನಿರ್ಧಾರ ಮಾಡಲಾಗಿದೆ. ಆದಕಾರಣ ಬೆಳಿಗ್ಗೆ 11.30ಕ್ಕೆ ಶಿಕ್ಷಣಾಧಿಕಾರಿಗಳ ಜೊತೆ ಶಿಕ್ಷಣಾ ಸಚಿವ ಸುರೇಶ್ ಕುಮಾರ್ ಸಭೆ ನಡೆಸಲಿದ್ದಾರೆ.
ಈ ಸಭೆಯಲ್ಲಿ ಶಿಕ್ಷಣಾ ಸಚಿವ ಸುರೇಶ್ ಕುಮಾರ್ ಎಲ್ಲಾ ಜಿಲ್ಲೆಗಳ ಡಿಡಿಪಿಐ, ಬಿಇಒಗಳ ಚರ್ಚಿಸಿ ಮಾಹಿತಿ ಸಂಗ್ರಹ ಮಾಡಲಿದ್ದಾರೆ. ಮಾಹಿತಿ ಸಂಗ್ರಹಿಸಿದ ಬಳಿಕ ಸಿಎಂ ಬಿಎಸ್ ಯಡಿಯೂರಪ್ಪ ಅವರ ಜೊತೆ ಸಭೆ ನಡೆಸಲಿದ್ದಾರೆ. ಶಾಲೆಗಳ ಆರಂಭಕ್ಕೆ ದಿನಾಂಕ ನಿಗದಿ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.