Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ವರ್ಗಾವಣೆ ಆದೇಶದ ಮರುದಿನವೇ ಬೆಳಗಾವಿ ತಹಶೀಲ್ದಾರ್‌ ಕಚೇರಿಯಲ್ಲೇ ಸಿಬ್ಬಂದಿ ಆತ್ಮಹತ್ಯೆ

ವರ್ಗಾವಣೆ ಆದೇಶದ ಮರುದಿನವೇ ಬೆಳಗಾವಿ ತಹಶೀಲ್ದಾರ್‌ ಕಚೇರಿಯಲ್ಲೇ  ಸಿಬ್ಬಂದಿ ಆತ್ಮಹತ್ಯೆ

Sampriya

ಬೆಳಗಾವಿ , ಮಂಗಳವಾರ, 5 ನವೆಂಬರ್ 2024 (13:04 IST)
Photo Courtesy X
ಬೆಳಗಾವಿ: ಇಲ್ಲಿನ ತಹಶೀಲ್ದಾರ್‌ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರೇಶ ಯಾದವಣ್ಣವರ (35) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

ಏಕಾಏಕಿ ವರ್ಗಾವಣೆ ಮಾಡಿದ ಹಿನ್ನೆಲೆ, ತಹಶೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಗುಮಾಸ್ತ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆಗೆ ಶರಣಾಗಿದ್ದಾರೆ. ರುದ್ರಣ್ಣ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಗಳು ಸೋಮವಾರ ಬೆಳಗಾವಿ ತಹಶೀಲ್ದಾರ್‌ ಕಚೇರಿಯಿಂದ ಸವದತ್ತಿ ಎಲ್ಲಮ್ಮ ಆಡಳಿತ ಕಚೇರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದರು.

ವರ್ಗಾವಣೆ ರದ್ದುಗೊಳಿಸುವಂತೆ ತಹಶೀಲ್ದಾರ್‌ ಹಾಗೂ ಡಿಸಿ ಮೊಹಮ್ಮದ್ ರೋಷನ್ ಅವರಿಗೆ ರುದ್ರಣ್ಣ ಮನವಿ ಮಾಡಿದ್ದರು. ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಚೇರಿಗೂ ಹೋಗಿ ಅಳಲು ತೋಡಿಕೊಂಡಿದ್ದರು. ಈ ಸಂಬಂಧ ಸೋಷಿಯಲ್‌ ಮೀಡಿಯಾದಲ್ಲಿ ಕೆಲವೊಂದು ಪೋಸ್ಟ್‌ ಕೂಡ ಹಾಕಿದ್ದರು.

ನಾನು ಜೀವ ಕಳೆದುಕೊಂಡರೆ ಅದಕ್ಕೆ ತಹಶೀಲ್ದಾರ್‌ ಹಾಗೂ ಡಿಸಿ ಕಾರಣ ಎಂದು ಡಿಪಾರ್ಟ್‌ಮೆಂಟ್‌ ವಾಟ್ಸಪ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಘಟನೆ ನಂತರ ಪೋಸ್ಟ್‌ ಡಿಲೀಟ್‌ ಆಗಿದ್ದು ಚರ್ಚೆಗೆ ಗ್ರಾಸವಾಗಿದೆ. ಸ್ಥಳಕ್ಕೆ ಡಿಸಿಪಿ ರೊಹಬ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಕೇಸ್ ದಾಖಲು: ಇಲ್ಲಿದೆ ಡೀಟೈಲ್ಸ್