Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವಜಾತ ಶಿಶು ಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದಿದೆ. ಸಿದ್ದಾಪುರದ ಗುಡ್ಡೆಕೊಪ್ಪ ಮಾರ್ಗದ ರಸ್ತೆಯ ಪಕ್ಕದಲ್ಲಿ ರೊಟ್ಟಿನ ಬಾಕ್ಸ್ ನಲ್ಲಿ ಶಿಶುವನಿಟ್ಟು ಹೋಗಿದ್ದಾರೆ. ಎರಡು ವಾರದ ನವಜಾತ ಗಂಡು ಮಗು ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿ ಮಗುವನ್ನ ಪೊಲೀಸರು ಹಾಗೂ ಶಿಶು ಅಭಿವೃದ್ಧಿ ಅಧಿಕಾರಿಗಳು ಮಗುವನ್ನ ರಕ್ಷಣೆ ಮಾಡಿದ್ದಾರೆ. ಅಂಗವೈಕಲ್ಯವಿದ್ದಿದ್ದರಿಂದ ಮಗುವನ್ನು ಬಿಟ್ಟುಹೋಗಿರುವ ಸಂಶಯ ವ್ಯಕ್ತವಾಗಿದೆ. ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.