Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪಟಾಕಿ ಸಿಡಿಸುವ ವೇಳೆ ಸ್ನೇಹಿತರ ಹುಚ್ಚಾಟಕ್ಕೆ ಯುವಕ ಬಲಿ

ಪಟಾಕಿ ಸಿಡಿಸುವ ವೇಳೆ ಸ್ನೇಹಿತರ ಹುಚ್ಚಾಟಕ್ಕೆ ಯುವಕ ಬಲಿ

Sampriya

ಬೆಂಗಳೂರು , ಸೋಮವಾರ, 4 ನವೆಂಬರ್ 2024 (16:43 IST)
Photo Courtesy X
ಬೆಂಗಳೂರು: ಪಟಾಕಿ ಸಿಡಿಸುವ  ವೇಳೆ ಸ್ನೇಹಿತರ ಹುಚ್ಚಾಟಕ್ಕೆ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದೆ. ಪ್ರತೀ ವರ್ಷವೂ ದೀಪಾವಳಿ ಸಂದರ್ಭದಲ್ಲಿ ಯುವಕರು ಮಾಡುವ ಎಡವಟ್ಟಿಗೆ ಪ್ರಾಣ ಹಾಗೂ ದೇಹಕ್ಕೆ ತೊಂದರೆಯಾಗುವುದನ್ನು ಗಮನಿಸಬಹುದು. ಸಾಕಷ್ಟು ಪ್ರಕರಣಗಳಲ್ಲಿ ತನ್ನದಲ್ಲದ ತಪ್ಪಿಗೆ ತೊಂದರೆ ಸಿಲುಕಿ ಕಣ್ಣು ಕಳೆದುಕೊಂಡಿದ್ದಾರೆ. ಇದೀಗ ಇತಂಹ ಹುಚ್ಚಾಟಕ್ಕೆ ಯುವಕನೋರ್ವ ಜೀವವನ್ನೇ ಕಳೆದುಕೊಂಡಿದ್ದಾನೆ.

ಪಟಾಕಿ ಸಿಡಿಸುವ ವೇಳೆ ಸ್ನೇಹಿತರ ಹುಚ್ಚಾಟಕ್ಕೆ ಯುವಕನೋರ್ವ ಬಲಿಯಾದ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದೆ.

ಮಾಹಿತಿ ಪ್ರಕಾರ, ಅಕ್ಟೋಬರ್ 31ರಂದು ಕೋಣನಕುಂಟೆ ಠಾಣೆ ವ್ಯಾಪ್ತಿಯ ವೀವರ್ಸ್ ಕಾಲೋನಿಯಲ್ಲಿ ಪಟಾಕಿ ಸ್ಫೋಟದಿಂದ ತೀವ್ರವಾಗಿ ಗಾಯಗೊಂಡಿದ್ದ ಶಬರೀಶ್ ಎಂಬ ಯುವಕ ಕೊನೆಯುಸಿರೆಳೆದಿದ್ದ.

ಅಕ್ಟೋಬರ್ 31ರಂದು ರಾತ್ರಿ ಮದ್ಯದ ನಶೆಯಲ್ಲಿ ಯುವಕರ ಗುಂಪೊಂದು ಪಟಾಕಿ ಸಿಡಿಸುತ್ತಿದ್ದರು. ಈ ವೇಳೆ ಶಬರೀಶ್‌ಗೆ ಪಟಾಕಿ ಹಚ್ಚುವಾಗ ಅದರ ಮೇಲೆ ಡಬ್ಬ ಇರಿಸಿ, ಆ ಡಬ್ಬದ ಮೇಲೆ ಕುಳಿತುಕೊಳ್ಳುವಂತೆ ಸವಾಲು ಹಾಕಿದ್ದಾರೆ.

ಅಮಲಿನಲ್ಲಿದ್ದ ಶಬರೀಶ್, ತಾನು ಪಟಾಕಿ ಸಿಡಿಯುವವರೆಗೂ ಡಬ್ಬದ ಮೇಲೆ ಕುಳಿತುಕೊಂಡರೆ, ತನಗೆ ಆಟೋ ರಿಕ್ಷಾ ಕೊಡಿಸಬೇಕು ಎಂದಿದ್ದ. ಅದಕ್ಕೆ ಸ್ನೇಹಿತರು ಒಪ್ಪಿಕೊಂಡಾಗ ಸವಾಲನ್ನು ಸ್ವೀಕರಿಸಿ ಪಟಾಕಿ ಇದ್ದ ಡಬ್ಬದ ಮೇಲೆ ಕುಳಿತಿದ್ದಾನೆ.

ಅದರಂತೆ ಭಾರೀ ಪಟಾಕಿಯನ್ನು ಡಬ್ಬದ ಕೆಳಗೆ ಇರಿಸಿ, ಅದಕ್ಕೆ ಬೆಂಕಿ ಹಚ್ಚಿ, ಡಬ್ಬದ ಮೇಲೆ ಶಬರೀಶ್‌ನನ್ನು ಕೂರಿಸಿದ್ದಾರೆ. ನಂತರ ಅಲ್ಲಿಂದ್ದ ಅವರು ಓಡಿದ್ದಾರೆ. ಪಟಾಕಿ ಸಿಡಿದ ರಭಸಕ್ಕೆ ಶಬರೀಶ್‌ನ ಖಾಸಗಿ ಅಂಗಕ್ಕೆ ತೀವ್ರವಾಗಿ ಸುಟ್ಟ ಗಾಯವಾಗಿತ್ತು. ತಕ್ಷಣ ಶಬರೀಶನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು‌ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 2ರಂದು ಆತ ಮೃತಪಟ್ಟಿದ್ದಾನೆ.

ಈ ಸಂಬಂಧ ಕೋಣನಕುಂಟೆ ಪೊಲೀಸರು ಆರೋಪಿಗಳಾದ ನವೀನ್, ದಿನಕರ್, ಸತ್ಯವೇಲು, ಕಾರ್ತಿಕ್, ಸತೀಶ್, ಸಂತೋಷ್ ಎಂಬುವರನ್ನು ಬಂಧಿಸಿದ್ದಾರೆ. ಸ್ನೇಹಿತರು ಪಟಾಕಿ ಸಿಡಿಸುವ ಕಿಡಿಗೇಡಿ ಕೃತ್ಯ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯವರು ವಕ್ಫ್ ನೋಟಿಸ್ ಕೊಟ್ರೆ ಸರೀನಾ: ಸಿದ್ದರಾಮಯ್ಯ