ಸಿಲಿಕಾನ್ ಸಿಟಿಯಲ್ಲಿ ಗ್ಯಾಸ್ ಗೀಸರ್ನಿಂದ ಸೋರಿಕೆಯಾದ ವಿಷ ಅನಿಲದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದ ಯುವತಿ ಸಾವನ್ನಪ್ಪಿದ ಘಟನೆ ಕಾಮಾಕ್ಷಿಪಾಳ್ಯದ ಮೀನಾಕ್ಷಿ ನಗರದಲ್ಲಿ ನಡೆದಿದೆ.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಮೃತಯುವತಿ ರಾಜೇಶ್ವರಿ ಸ್ನಾನ ಮಾಡಲು ಹೋಗಿದ್ದ ವೇಳೆ ಈ ಅವಘಡ ಸಂಭವಿಸಿದೆ.ಇನ್ನು ವಿಷಯ ತಿಳಿದ ಕುಟುಂಬಸ್ಥರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು ಪ್ರಯೋಜನವಾಗಿಲ್ಲ. ಈ ಕುರಿತ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.