ಮುಂಬೈ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಬೆಂಗಳೂರಿನ ರಾಜ ಭವನದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ವಜೂ ಭಾಯಿ ವಾಲಾ ಅವರು ಅಭಯ್ ಶ್ರೀನಿವಾಸ್ ಓಕಾ ಅವರಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು.
ಈ ಮುನ್ನ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯ್ ಭಾಸ್ಕರ್ ಅವರು ರಾಷ್ಟ್ರಪತಿ ಭವನದಿಂದ ಸ್ವೀಕೃತವಾದ ನೇಮಕಾತಿ ಅಧಿಸೂಚನೆಯನ್ನು ವಾಚಿಸಿದರು.
ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಬೆಂಗಳೂರು ಮಹಾಪೌರರಾದ ಗಂಗಾಂಬಿಕೆ ಮಲ್ಲಿಕಾರ್ಜುನ, ಕರ್ನಾಟಕ ಉಚ್ಛ ನ್ಯಾಯಾಲಯದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ, ಬಿಹಾರ ಮತ್ತು ಜಾರ್ಖಂಡ್‍ನ ರಾಜ್ಯಪಾಲ ನ್ಯಾಯಮೂರ್ತಿ ಎಂ. ರಾಮಾ ಜೋಯಿಸ್, ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಧೀರೇಂದ್ರ ಹೀರಾಲಾಲ್ ವಘೇಲಾ ಮತ್ತಿತರ ಹಿರಿಯ ಅಧಿಕಾರಿಗಳಿದ್ದರು.