ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಸಾಮಾಜಿಕ ಕಾರ್ಯಕರ್ತ ಕೆ.ಸಿ ರಾಜಣ್ಣ ಹಾಗೂ ವಕೀಲರ ತಂಡ ಎಸಿಬಿಗೆ ದೂರು ನೀಡಿದ್ದಾರೆ.
ಅರ್ಹತೆ ಇಲ್ಲದ CESS ಎನ್ನುವ ಖಾಸಗಿ ಶಿಕ್ಷಣ ಸಂಸ್ಥೆಗೆ 116 ಎಕರೆ ಜಮೀನು ಮಂಜೂರು ಮಾಡಿದ್ದು, ತನಿಖೆ ನಡೆಸುವಂತೆ ಎಸಿಬಿಗೆ ದೂರು ನೀಡಲಾಗಿದೆ.
ಹರಳೂರು ಮತ್ತು ಪೂಲನಹಳ್ಳಿ ಬಳಿ ಇದ್ದ ಕೆಐಎಡಿಬಿಗೆ ಸೇರಿದ ಜಮೀನನ್ನ ಅಧಿಕಾರ ದುರುಪಯೋಗ ಪಡಿಸಿಕೊಂಡು ಶಿಕ್ಷಣ ಸಂಸ್ಥೆಗೆ ಮಂಜೂರು ಮಾಡಲಾಗಿದೆ. ಅರ್ಜಿ ಸಲ್ಲಿದ 30 ದಿನಗಳಲ್ಲಿ 166 ಎಕರೆ ಜಮೀನು ಮಂಜೂರು ಮಾಡಲಾಗಿದೆ.
ಚೆಸ್ ಸಂಸ್ಥೆ 130 ಎಕರೆ ಭೂಮಿ ಮಂಜೂರು ಮಾಡಲು ನೇರವಾಗಿ ಅಂದಿನ ಸಿಎಂ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿತ್ತು. 25 ಎಕರೆಗಿಂತ ಹೆಚ್ಚು ಜಮೀನು ಮಂಜೂರು ಮಾಡುವಾಗ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿ ಮೊದಲು ಮನವಿ ಸಲ್ಲಿಸಬೇಕು.
ಈ ನಿಯಮವನ್ನು ಗಾಳಿಗೆ ತೂರಿ ಖಾಸಗಿ ವಿ.ವಿ ಸ್ಥಾಪಿಸಲು ಬಿಎಸ್ವೈ ಜಮೀನು ಮಂಜೂರು ಮಾಡಿಕೊಟ್ಟಿದ್ದಾರೆ.