ಪ್ರತಿಪಕ್ಷಗಳನ್ನು ನಿಗ್ರಹಿಸಲು ಸಿಎಂ ಸಿದ್ದರಾಮಯ್ಯ ಎಸಿಬಿ ರಚನೆ ಮಾಡಿದ್ದಾರೆ ಎಂದು ಮಾಜಿ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಮಲ್ಲೇಶ್ವರಂ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮರ್ಥವಾಗಿ, ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದ ಲೋಕಾಯುಕ್ತ ಸಂಸ್ಥೆಯನ್ನು ತುಳಿದು ಎಸಿಬಿ ರಚನೆ ಮಾಡಿದ್ದಾರೆ. ಕೇವಲ ಪ್ರತಿಪಕ್ಷಗಳನ್ನು ಹಣಿಯಲು ಎಸಿಬಿ ರಚಿಸಲಾಗಿದೆ ಎಂದು ಕಿಡಿಕಾರಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಎಸಿಬಿಯಲ್ಲಿ ದೂರು ದಾಖಲಿಸಲಾಗಿದೆ. ಅಂದಿನ ಭೂಸ್ವಾಧೀನಾಧಿಕಾರಿ ಬಸವರಾಜೇಂದ್ರ ಮೇಲೆ ಒತ್ತಡ ಹೇರಿ ಯಡಿಯೂರಪ್ಪ ವಿರುದ್ಧ ಸಾಕ್ಷ್ಯ ಹೇಳುವಂತೆ ಆಗ್ರಹಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಸಿಬಿ, ಪೊಲೀಸ್ ಇಲಾಖೆಗೆ ಸಿಎಂ ಸಿದ್ದರಾಮಯ್ಯನವರೇ ಮುಖ್ಯಸ್ಥರಾಗಿದ್ದಾರೆ. ಸರಕಾರವೇ ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಲು ಪ್ರಚೋದಿಸಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.