ರಾಜ್ಯದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆಗೆ ನಡೆಸಿದ್ದು, ಒಟ್ಟು 60 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 400ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಅಕ್ರಮ ಆಸ್ತಿ ಸಂಪಾದನೆ ಪರಿಶೀಲನೆ ಮಾಡುತ್ತಿದ್ದಾರೆ.ಬೆಂಗಳೂರು ನಗರದಲ್ಲಿ ಬೆಳಂಬೆಳಗ್ಗೆ ಸಿಸಿಬಿ ಅಧಿಕಾರಿಗಳು ದಾಳಿಗೆ ಮಾಡಿದ್ದು, ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಸೇರಿ ನಾಲ್ವರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಕಾಲ ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ ಸೇರಿ ಒಟ್ಟು ನಾಲ್ವರ ಮನೆಗಳ ಮೇಲೆ ಎಸಿಬಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.ಗದಗ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ ಮನೆ ಮೇಲೆ ಎಸಿಬಿ ದಾಳಿ ಮಾಡಿದ್ದು, 3.5 ಕೋಟಿ ರೂ. ಮೌಲ್ಯದ 7 ಕೆಜಿ ಚಿನ್ನ ಮತ್ತು 15 ಲಕ್ಷ ರೂ. ನಗದನ್ನು ಎಸಿಬಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. 15 ಸರಕಾರಿ ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ಮಾಡಿದ್ದರು.