Publish Date: Fri, 21 Apr 2023 (15:07 IST)
Updated Date: Fri, 21 Apr 2023 (16:20 IST)
ನಾಮಪತ್ರ ತಿರಸ್ಕೃತವಾಗುವ ಭೀತಿಯಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಸಿಹಿ ಸುದ್ದಿ ಸಿಕ್ಕಿದೆ. ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ನಾಮಪತ್ರ ಅಂಗೀಕಾರವಾಗಿದೆ. ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.. ಡಿ.ಕೆ.ಶಿವಕುಮಾರ್ ನಾಮಪತ್ರ ಕ್ರಮಬದ್ಧವಾಗಿದೆ ಎಂದು ಚುನಾವಣಾ ಆಯೋಗ ಪರಿಶೀಲನೆ ನಡೆಸಿ ತನ್ನ ನಿಲುವು ಪ್ರಕಟಿಸಿದೆ.. ಮೊದಲು ಟ್ಯಾಕ್ಸ್ ವಿಚಾರದಲ್ಲಿ ಗೊಂದಲ ವ್ಯಕ್ತವಾಗಿತ್ತು, ಆದ್ರೆ ಎಲ್ಲವನ್ನೂ ಕ್ಲಿಯರ್ ಮಾಡಿ ಚುನಾವಣಾ ಆಯೋಗ ನಾಮಪತ್ರ ಊರ್ಜಿತಗೊಳಿಸಿದೆ.. ಡಿ.ಕೆ.ಶಿವಕುಮಾರ್ ಪ್ರತಿಯೊಂದಕ್ಕೂ ಸೂಕ್ತ ದಾಖಲೆಗಳನ್ನ ಒದಗಿಸಿದ್ದಾರೆ.. ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಎರಡೂ ನಾಮಪತ್ರಗಳು ಅಂಗೀಕಾರವಾಗಿದ್ದು, ಕನಕಪುರದಿಂದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಡಿಕೆಶಿ ಕಣಕ್ಕೆ ಇಳಿಯಲಿದ್ದಾರೆ