ದಶಪಥ ಹೆದ್ದಾರಿಯಲ್ಲಿ ಮತ್ತೆ ಅಪಘಾತಗಳು

Webdunia
ಗುರುವಾರ, 12 ಅಕ್ಟೋಬರ್ 2023 (19:00 IST)
ಅಪಘಾತಗಳ ಹಾಟ್‌ಸ್ಪಾಟ್‌ ಹಾಗೂ ಟೋಲ್‌ ರದ್ದಾಂತಗಳಿಂದ ಕೆಲ ದಿನಗಳಿಂದ ದೂರ ಉಳಿದಿದ್ದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಮತ್ತೆ ಅಪಘಾತ ವಲಯವಾಗಿ ಮಾರ್ಪಟ್ಟಿದೆ. ಎಕ್ಸ್‌ಪ್ರೆಸ್‌ವೇಯಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ಅನೇಕ ಯೋಜನೆಗಳು ಸ್ಥಗಿತಗೊಂಡಿದ್ದು, ಸಂಚಾರ ವಿಭಾಗದ ಎಡಿಜಿಪಿ ಆಗಿದ್ದ ಅಲೋಕ್‌ ಕುಮಾರ್‌ ಅವರ ವರ್ಗಾವಣೆ ಬಳಿಕ ಹೈವೇ ಮತ್ತೆ ಅಧ್ವಾನಗೊಳ್ಳುತ್ತಿದೆ. 118 ಕಿ.ಮೀ ಎಕ್ಸ್‌ಪ್ರೆಸ್‌ವೇಯಲ್ಲಿ ರೆಸ್ಟ್‌ ಏರಿಯಾ ನಿರ್ಮಾಣ, ಹೆಲಿಪ್ಯಾಡ್‌ ಸೇರಿದಂತೆ ಒಂದಷ್ಟು ಕಾಮಗಾರಿಗಳಿಗೆ 1 ಸಾವಿರ ಕೋಟಿ ಅನುದಾನ ಹೆಚ್ಚುವರಿಯಾಗಿ ಕೇಳಲಾಗಿತ್ತು. ಚನ್ನಪಟ್ಟಣ-ರಾಮನಗರ ನಡುವೆ ರೆಸ್ಟ್‌ ಏರಿಯಾ ನಿರ್ಮಿಸಿ, ಸ್ಥಳೀಯ ಮಾರುಕಟ್ಟೆಗಳಿಗೆ ಅವಕಾಶ ನೀಡುವ ಭರವಸೆ ನೀಡಿಯೇ ವರ್ಷ ಕಳೆದಿವೆ. ಎಡಿಜಿಪಿ ಅಲೋಕ್‌ ಕುಮಾರ್‌ ಅವರ ವರ್ಗಾವಣೆ ಬಳಿಕ ಮತ್ತೆ ಅಪಘಾತಗಳು ಶುರುವಾಗಿವೆ. ಇನ್ನು ಯೋಜನೆಗಳ ಅನುಷ್ಠಾನದ ಬಗ್ಗೆ ಪ್ರಾಧಿಕಾರದ ಯೋಜನಾ ನಿರ್ದೇಶಕರೊಂದಿಗೆ ಸಭೆ ನಡೆಸಿ, ನಿರ್ದೇಶನ ನೀಡಲಾಗುವುದು. ಕ್ಯಾಮೆರಾ ಅಳವಡಿಕೆ ಬಗ್ಗೆ ಮಾಹಿತಿ ಕೇಳಲಾಗುವುದು ಎಂದು ರಾಮನಗರ ಜಿಲ್ಲಾಧಿಕಾರಿ ಅವಿನಾಶ್‌ ಮೆನನ್‌ ರಾಜೇಂದ್ರನ್‌ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments