Publish Date: Wed, 18 Oct 2023 (17:23 IST)
Updated Date: Wed, 18 Oct 2023 (17:27 IST)
ಬೆಂಗಳೂರಿನ ರಾಜಾಜಿನಗರ ನಿವಾಸಿ ಅರುಣ್ ಸುದರ್ಶನ್ ಎಂಬುವನು ಅಮೆರಿಕದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸುಧಾಮೂರ್ತಿ ಮುಖ್ಯ ಅತಿಥಿಯಾಗಿ ಬರಲಿದ್ದಾರೆ ಎಂದು ಸುಳ್ಳು ಹೇಳಿ 40 ಡಾಲರ್ ಪಡೆದು ಟಿಕೆಟ್ ಮಾರಾಟ ಮಾಡಿ ವಂಚಿಸಿದ ಆರೋಪದಡಿ ಲಾವಣ್ಯ, ಶೃತಿ ಎಂಬುವವರ ವಿರುದ್ಧ ಸುಧಾಮೂರ್ತಿ ಅವರ ಎಕ್ಸಿಕ್ಯೂಟಿವ್ ಅಸಿಸ್ಟೆಂಟ್ ಮಮತಾ ಸಂಜಯ್ ದೂರು ನೀಡಿದ್ದರು. ಈ ದೂರಿನ ಮೇರೆಗೆ ತನಿಖೆ ನಡೆಸಿ ಆರೋಪಿ ಅರುಣ್ ಸುದರ್ಶನ್ ನನ್ನು ಬಂಧಿಸಲಾಗಿದೆ.