Select Your Language

Notifications

webdunia
webdunia
webdunia
webdunia

ಮಾತನಾಡಲು ನಿರಾಕರಿಸಿದಕ್ಕೆ ಯುವತಿಗೆ ಆ್ಯಸಿಡ್ ದಾಳಿ!

ಬೆದರಿಕೆ
ಗಾಂಧಿನಗರ :  ಮಾತನಾಡಲು ನಿರಾಕರಿಸಿದ 25 ವರ್ಷದ ಯುವತಿಗೆ ಆ್ಯಸಿಡ್ ದಾಳಿ ನಡೆಸುವುದಾಗಿ ವ್ಯಕ್ತಿಯೋರ್ವ ಬೆದರಿಕೆ ಹಾಕಿರುವ ಘಟನೆ ಅಹಮದಬಾದ್ನಲ್ಲಿ ನಡೆದಿದೆ.

ಇದೀಗ ಯುವತಿ ಆ್ಯಸಿಡ್ ದಾಳಿ ಬೆದರಿಕೆಯೊಡ್ಡಿದ್ದ ಆರೋಪಿ ವಿರುದ್ಧ ವೆಜಾಲ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅಹಮದಾಬಾದ್ನ ಜುಹಾಪುರದ ನಿವಾಸಿಯಾಗಿರುವ ಸಂತ್ರಸ್ತೆ, ವೆಜಲ್ಪುರದಲ್ಲಿ ವಾಸಿಸುವ ಮನ್ಸೂರಿ ಇಬ್ಬರೂ ಸುಮಾರು ಏಳು ವರ್ಷಗಳಿಂದ ಸ್ನೇಹಿತರಾಗಿದ್ದರು. ಆದರೆ ಇದೀಗ ಯುವತಿ ಆತನೊಂದಿಗೆ ಮಾತನಾಡುವುದನ್ನು ನಿಲ್ಲಿಸಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. 

ಆಗ ಯುವತಿ ನಿನ್ನೊಂದಿಗೆ ಸ್ನೇಹ ಬೆಳೆಸಲು ಇಷ್ಟವಿಲ್ಲ ಎಂದು ಹೇಳಿದ್ದು, ಇಬ್ಬರ ನಡುವೆ ವಾಗ್ವಾದ ನಡೆದಿದೆ. ಇದರಿಂದ ಕೋಪಗೊಂಡ ಮನ್ಸೂರಿ ಆಕೆಯ ಮೇಲೆ ದೌರ್ಜನ್ಯ ಎಸಗಲು ಮುಂದಾಗಿದ್ದಾನೆ.
ಈ ವೇಳೆ ಯುವತಿ ಕಿರುಚಾಡಿದ್ದರಿಂದ ಅವರ ನೆರೆಹೊರೆಯವರು ಧಾವಿಸಿದಾರೆ. ಆಗ ವ್ಯಕ್ತಿ ಸಂತ್ರಸ್ತೆಗೆ ಆ್ಯಸಿಡ್ ದಾಳಿ ನಡೆಸುವುದಾಗಿ ಬೆದರಿಕೆಯೊಡ್ಡಿ ಅಲ್ಲಿಂದ ಪರಾರಿಯಾಗಿದ್ದಾನೆ.


Share this Story:

Follow Webdunia kannada

ಮುಂದಿನ ಸುದ್ದಿ

200ಕೋಟಿ ಪ್ರಕರಣ ಟ್ವಿಸ್ಟ್