Publish Date: Thu, 27 Sep 2018 (16:31 IST)
Updated Date: Thu, 27 Sep 2018 (16:32 IST)
ಕೆ.ಆರ್.ಎಸ್ ಡ್ಯಾಂ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಹೇಳಿದ್ದಾರೆ.
ಮಂಡ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿಕೆ ನೀಡಿದ್ದು, ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರದ ವರದಿ ನೋಡಿದ್ದೇನೆ. ಡ್ಯಾಂ ಸುರಕ್ಷತೆಗಾಗಿ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲು ಸಲಹೆ ನೀಡಿದೆ ಎಂದಿದ್ದಾರೆ.
ಕೆ.ಆರ್.ಎಸ್ ಡ್ಯಾಂ ನ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಡ್ಯಾಂ ನ 20 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಗಣಿಗಾರಿಕೆ ನಡೆಯದಂತೆ 144 ಸೆಕ್ಷನ್ ಜಾರಿಗೊಳಿಸಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ ಎಂದರು. ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ವರದಿ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ತಿಳಿಸಿದ್ದೇನೆ ಎಂದು ಸಚಿವ ಪುಟ್ಟರಾಜು ಹೇಳಿದ್ದಾರೆ.
Jagadeesh
Publish Date: Thu, 27 Sep 2018 (16:31 IST)
Updated Date: Thu, 27 Sep 2018 (16:32 IST)