Publish Date: Wed, 27 Jul 2022 (11:14 IST)
Updated Date: Wed, 27 Jul 2022 (11:15 IST)
ಬೆಂಗಳೂರು : ರಾಜ್ಯದಲ್ಲಿ ಒಬ್ಬ ಅಮಾಯಕನ ಕೊಲೆಯಾದಾಗ ಆಕ್ರೋಶ ಇರುತ್ತೆ.
ಕೇರಳ ಗಡಿ ದಾಟಿ ಕೊಲೆಗಾರರ ಹಿಡಿಯಲು ಹೋಂ ಮಿನಿಸ್ಟರ್, ಪೊಲೀಸರಿಗೆ ಸೂಚನೆ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೂ ಇಲ್ಲದಿರುವಾಗ ಕೊಲೆ ನಡೆದಿದೆ. ಹಿಂದಿನಿಂದ ಬಂದು ಕೊಲೆ ಮಾಡಿದ್ದಾರೆ. ಕೊಲೆಗಡುಕರ ದಸ್ತಗಿರಿ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ.
ಇದು ಒಂದು ವ್ಯವಸ್ಥಿತ ಸಂಚು. ಕ್ಷೋಬೆ ಉಂಟು ಮಾಡುವ ವರ್ಗದಿಂದ ಕೊಲೆ ಮಾಡಲಾಗಿದೆ. ಆ ವರ್ಗವನ್ನು ಸದೆ ಬಡಿಯುವ ಕೆಲಸ ಮಾಡ್ತೇವೆ ಎಂದು ಸಿಎಂ ಹೇಳಿದರು.
ಜನರಲ್ಲಿ ಆಕ್ರೋಶ ಇದೆ. ಜನರಿಗೆ ಶಾಂತಿ ಕಾಪಾಡಲು ಮನವಿ ಮಾಡಿಕೊಳ್ಳುತ್ತೇವೆ. ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಕಾರುತ್ತಿಲ್ಲ. ಆ ಘಟನೆ ನಡೆಯಬಾರದಿತ್ತು ಅಂತ ಆಕ್ರೋಶ ಅವರದ್ದು ಎಂದು ಹೇಳುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗ್ತಿರುವ ಆಕ್ರೋಶಕ್ಕೆ ಸಿಎಂ ಸ್ಪಷ್ಟನೆ ನೀಡಿದರು.