Publish Date: Fri, 13 Dec 2019 (11:31 IST)
Updated Date: Fri, 13 Dec 2019 (11:34 IST)
ಹೊಸಪೇಟೆ: ಹೊಸಪೇಟೆಯಲ್ಲಿ ನಡೆದ ಕಾಂಗ್ರೆಸ್ ನ ಸೋಲಿನ ಪರಾಮರ್ಶೆ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಾಯಕರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ನ ಸೋಲಿನ ಪರಾಮರ್ಶೆ ಸಭೆ ನಡೆಸಲಾಗಿತ್ತು. ಆ ವೇಳೆ ವಿ.ಎಸ್ ಉಗ್ರಪ್ಪ ಹಾಗೂ ಜಿಲ್ಲಾಧ್ಯಕ್ಷ ಶಿವಯೋಗಿ ವಿರುದ್ಧ ಕಾರ್ಯಕರ್ತರು ವಾಗ್ದಾಳಿ ನಡೆಸಿದ್ದಾರೆ.
ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಹಿನ್ನಲೆ ಸೋಲಿಗೆ ವಿ.ಎಸ್ ಉಗ್ರಪ್ಪ ಹಾಗೂ ಜಿಲ್ಲಾಧ್ಯಕ್ಷ ಶಿವಯೋಗಿ ಕಾರಣ ಎಂದು ಕಿಡಿಕಾರಿದ್ದಾರೆ.