ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಕೊಲೆ ರಾಜಕೀಯ ಪ್ರೇರಿತ. ಆರೆಸ್ಸೆಸ್ ಸಂಘಟನೆಯನ್ನು ಬಗ್ಗುಬಡಿಯುವ ಉದ್ದೇಶದಿಂದ ಹತ್ಯೆಗೈಯಲಾಗಿದೆ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಗಂಭೀರವಾಗಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಕೊಲೆ ಆರೋಪಿಗಳನ್ನು ಬಂಧಿಸುವಂತೆ ನಿನ್ನೆ ಸಂಜೆವರೆಗೂ ಸಮಯ ನೀಡಿದ್ದೇವು. ಆದರೂ ಆರೋಪಿಗಳನ್ನು ಬಂಧಿಸಿಲ್ಲ. ಆರೋಪಿಗಳನ್ನು ಬಂಧಿಸುವವರೆಗೂ ಬಿಜೆಪಿ ಹೋರಾಟ ನಡೆಸುತ್ತದೆ ಎಂದು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದರು.
ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಕೊಲೆ ಆರೋಪಿಗಳನ್ನು ಬಂಧಿಸಿ ನ್ಯಾಯ ಒದಗಿಸಿ. ಇಂದು ಸಹ ಆರೋಪಿಗಳನ್ನು ಬಂಧಿಸದಿದ್ದರೆ ರಾಜ್ಯದ ಜನತೆ ರೊಚ್ಚಿಗೇಳುತ್ತಾರೆ. ನಾಳೆಯೂ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸುತ್ತಿವೆ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದರು.
ಆರ್‌ಎಸ್‌ಎಸ್ ಹಾಗೂ ಬಿಜೆಪಿ ಕಾರ್ಯಕರ್ತ ರುದ್ರೇಶ್ (35) ಕೊಲೆ ಪ್ರಕರಣ ತ್ರೀವ್ರಸ್ವರೂಪ ಪಡೆದುಕೊಂಡಿದ್ದು, ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಇಂದು ಶಿವಾಜಿನಗರ ಬಂದ್‌ಗೆ ಕರೆ ನೀಡಿದ್ದು, ಉಗ್ರ ಪ್ರತಿಭಟನೆ ನಡೆಸುತ್ತಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ