Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನಟ ಜಗ್ಗೇಶ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ರಾಜ್ಯಸಭೆಯಲ್ಲಿ ಇಂದು ಕನ್ನಡದಲ್ಲಿಯೇ ಜಗ್ಗೇಶ್ ಪ್ರಮಾಣವಚನ ಸ್ವೀಕರಿಸಿದ್ದು, ಎಲ್ಲರ ಗಮನಸೆಳೆಯುತ್ತಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿದ್ದ ಪೀಠದ ಸಮ್ಮುಖದಲ್ಲಿ ಜಗ್ಗೇಶ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಗುರು ರಾಘವೇಂದ್ರರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಟ ಜಗ್ಗೇಶ್, ಬಳಿಕ ಕುಳಿತುಕೊಂಡು ಸಹಿ ಹಾಕುವುದರ ಮೂಲಕ ಅಧಿಕೃತವಾಗಿ ಇಂದಿನಿಂದ ರಾಜ್ಯಸಭೆ ಸದಸ್ಯರಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ನಟ ಜಗ್ಗೇಶ್, ಇಂದು ರಾಜ್ಯ ಸಭೆಯಲ್ಲಿ ಶ್ರದ್ಧೆಯಿಂದ ಪ್ರಮಾಣವಚನ ಸ್ವೀಕರಿಸಿದ್ದೇನೆ. ಸಿರಿಗನ್ನಡದಲ್ಲಿ ರಾಯರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ಇದು ನನ್ನ ಬದುಕಿನ ಶ್ರೇಷ್ಠ ಕ್ಷಣ ಎಂದು ಬಣ್ಣಿಸಿದ್ದಾರೆ.