Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ನಟಿ ಜಯಂತಿ ನಿಧನ; ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಸಿದ್ಧತೆ

ನಟಿ ಜಯಂತಿ ನಿಧನ; ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಸಿದ್ಧತೆ
ಬೆಂಗಳೂರು , ಸೋಮವಾರ, 26 ಜುಲೈ 2021 (12:57 IST)
ಅಂತಿಮ ದರ್ಶನಕ್ಕಾಗಿ ನಟಿ ಜಯಂತಿ ಅವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಇಡಲು ಸಿದ್ಧತೆ ನಡೆಸಲಾಗಿದೆ. ಮಧ್ಯಾಹ್ನ 12ರಿಂದ ಸಂಜೆ 4 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದು ನಟಿ ತಾರಾ ಅನುರಾಧ ಹೇಳಿದ್ದಾರೆ.

ಅಭಿನಯ ಶಾರದೆ, ಕನ್ನಡ ಚಿತ್ರರಂಗದ ಮೇರು ನಟಿ ಜಯಂತಿ ಇಂದು ಮುಂಜಾನೆ ಬನಶಂಕರಿಯ ಸ್ವಗೃಹದಲ್ಲಿ ಕೊನೆಯುಸಿರೆಳಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬಸ್ಥರು ಅಭಿಪ್ರಾಯಪಟ್ಟಿದ್ದಾರೆ.
webdunia

ಜಯಂತಿ ಅವರಿಗೆ ಕಳೆದ ಮೂರ್ನಾಲ್ಕು ವರ್ಷಗಳಿಂದಲೂ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಕಳೆದ ಬಾರಿ ಆಸ್ಪತ್ರೆಗೆ ದಾಖಲಾಗಿ ಬಳಿಕ ಸುಧಾರಿಸಿಕೊಂಡಿದ್ದರು.ನಿನ್ನೆ ರಾತ್ರಿ ಎಂದಿನಂತೆ ಊಟ ಮಾಡಿ ಮಲಗಿದ್ದರು, ಬೆಳಗ್ಗೆ ಎದ್ದೇಳಲೇ ಇಲ್ಲ. ರಾತ್ರಿ ಈ ಘಟನೆ ಹೇಗೆ ಸಂಭವಿಸಿತೋ ಗೊತ್ತಿಲ್ಲ. ಹೃದಯಾಘಾತವಾಗಿರಬಹುದೇನೋ ಗೊತ್ತಿಲ್ಲ. ಮುಂದಿನ ಕಾರ್ಯಗಳ ಬಗ್ಗೆಯೂ ಗೊತ್ತಾಗ್ತಿಲ್ಲ. ಬೆಳಗ್ಗೆ ಎದ್ದೇಳಿದೋಕೆ ನೋಡಿದೆವು, ಆಗಲೇ ನಮಗೆ ತಿಳಿದಿದ್ದು ಎಂದು ಜಯಂತಿ ಅವರ ಮಗ ಕೃಷ್ಣ ಕುಮಾರ್ ಹೇಳಿದ್ದಾರೆ.
webdunia

ಅಂತಿಮ ದರ್ಶನಕ್ಕಾಗಿ ನಟಿ ಜಯಂತಿ ಅವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಇಡಲು ಸಿದ್ಧತೆ ನಡೆಸಲಾಗಿದೆ. ಮಧ್ಯಾಹ್ನ 12ರಿಂದ ಸಂಜೆ 4 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದು ನಟಿ ತಾರಾ ಅನುರಾಧ ಹೇಳಿದ್ದಾರೆ.
ಹಿರಿಯ ನಟಿ ಜಯಂತಿ ನಿಧನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಸೇರಿ ಅನೇಕ ರಾಜಕೀಯ ನಾಯಕರು ಹಾಗೂ ಸಿನಿಮಾ ನಟ-ನಟಿಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಿಎಸ್ವೈ ಟ್ವೀಟ್ ಮಾಡಿದ್ದಾರೆ.
ಕರ್ನಾಟಕದಲ್ಲಿ ನಟಿ ಜಯಂತಿ ಅಂದ್ರೆ ಉತ್ತಮ ಕಲಾವಿದೆ, ಹಿರಿಯ ನಟಿ. ಅವರ ನಿಧನದಿಂದ ಚಿತ್ರರಂಗ ಬಡವಾಗಿದೆ. ಚಿತ್ರರಂಗದಲ್ಲಿ ಅವರದೇ ಒಂದು ಹೆಸರಿತ್ತು. ಈಗ ರಾಜ್ಯ, ಚಿತ್ರರಂಗ ಬಡವಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಿಷಾದ ವ್ಯಕ್ತಪಡಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಾಧನಾ ಸಮಾವೇಶದಲ್ಲಿ ಸಿಎಂ ಕಣ್ಣೀರು!?