Publish Date: Saturday, 07 August 2021 (15:15 IST)
Updated Date: Saturday, 07 August 2021 (15:16 IST)
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಬೆಂಗಳೂರು ಸಮೀಪದ ತೋಟದ ಮನೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಲದೇವನಹಳ್ಳಿಯ ತೋಟದ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದರಿಂದ ಲೀಲಾವತಿ ಅವರಿಗೆ ಸೊಂಟ ಹಾಗೂ ಕಾಲಿಗೆ ಪೆಟ್ಟಾಗಿದೆ.
ಲೀಲಾವತಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಒಂದು ವಾರಗಳ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ.