Publish Date: Fri, 21 Oct 2022 (18:33 IST)
Updated Date: Fri, 21 Oct 2022 (18:36 IST)
ಮಾಜಿ ಪ್ರಧಾನಿ H.D ದೇವೇಗೌಡರು ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೇಗೌಡರನ್ನು ಸಂಧಾನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಶಾಸಕ ಜಿ.ಟಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ನಿನ್ನೆಯಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇನೆ. ಮನಸ್ಸು ಮೂರು ವರ್ಷಗಳ ನಂತರ ಸಮಾಧಾನದಲ್ಲಿದೆ. ನಾನು ನನ್ನ ಮನೆಯವರು ಹೆಚ್ಚು ಖುಷಿಯಲ್ಲಿದ್ದೇವೆ. ಇನ್ನೂ ಯಾವ ಗೊಂದಲಗಳು ಉಳಿದಿಲ್ಲ. ಚಾಮುಂಡಿ ತಾಯಿಗೆ ಎಚ್.ಡಿ.ದೇವೇಗೌಡರು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇನ್ನೊಂದು ತಿಂಗಳನಲ್ಲಿ ನಾನು ವಾಕ್ ಮಾಡುವ ಶಕ್ತಿಕೊಡು ಎಂದು ತಾಯಿ ಮುಂದೆ ಬೇಡಿದ್ದಾರೆ. ಜನವರಿ ತಿಂಗಳಿನಲ್ಲಿ ಎಚ್.ಡಿ. ದೇವೇಗೌಡರು ಚಂಡಿಕಾ ಹೋಮ ನಡೆಸಲಿದ್ದಾರೆ. ಎಚ್.ಡಿ. ದೇವೇಗೌಡರ ಉತ್ಸಾಹ ಕಂಡು ನಾವೇ ಅಚ್ಚರಿಗೆ ಒಳಗಾಗಿದ್ದೇವೆ. ಅವರೇ ನಮಗೆ ಪ್ರೇರಣೆ. ಅವರನ್ನು ಸಂತೋಷವಾಗಿಡುವುದೇ ನಮ್ಮ ಸಂತೋಷ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.