ತುಮಕೂರು: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿದ ಬಳಿಕ ಇದೀಗ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಆ ಸಮುದಾಯದ ಪ್ರೀತಿ ಗಳಿಸುವಲ್ಲಿ ಪೈಪೋಟಿಗೆ ಬಿದ್ದಿವೆ.
ಮೊನ್ನೆಯಷ್ಟೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತುಮಕೂರಿನ ಸಿದ್ಧಗಂಗಾ ಮಠದ ಶತಾಯುಷಿ ಶ್ರೀ ಶಿವಕುಮಾರ ಸ್ವಾಮೀಜಿ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು. ಆ ಮೂಲಕ ತಾವು ಲಿಂಗಾಯತ ಸಮುದಾಯದ ಜತೆಗಿದ್ದೇವೆ ಎಂದು ಸಂದೇಶ ನೀಡಿದ್ದರು.
ಇದೀಗ ರಾಹುಲ್ ಗಾಂಧಿ ಸರದಿ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಇಂದು ಶಿವಕುಮಾರ ಸ್ವಾಮೀಜಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಳಿಕ, ಚಿತ್ರದುರ್ಗದಲ್ಲಿ ಲಿಂಗಾಯತ ಸಮುದಾಯದ ಪ್ರಾಬಲ್ಯವಿರುವಲ್ಲಿ ರೋಡ್ ಶೋ ನಡೆಸಿ ಭಾಷಣ ಮಾಡಲಿದ್ದಾರೆ. ಆ ಮೂಲಕ ಎರಡೂ ಪಕ್ಷಗಳು ಮತ ಬೇಟೆಗೆ ಪೈಪೋಟಿಗೆ ಬಿದ್ದಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ