Webdunia - Bharat's app for daily news and videos

Install App

ಸಿಎಂ ಬದಲಾವಣೆ ವಿಚಾರದಲ್ಲಿ ಡಿಕೆ ಶಿವಕುಮಾರ್ ಬಳಿಕ ಸಿಎಂ ಸಿದ್ದರಾಮಯ್ಯ ಬಣದಿಂದ ಮಹತ್ವದ ಹೆಜ್ಜೆ

ಕೃಷ್ಣವೇಣಿ ಕೆ
ಮಂಗಳವಾರ, 28 ಏಪ್ರಿಲ್ 2026 (10:05 IST)
ಬೆಂಗಳೂರು: ಸಿಎಂ ಬದಲಾವಣೆ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಡಿಕೆ ಶಿವಕುಮಾರ್ ಬಳಿಕ ಈಗ ಸಿಎಂ ಸಿದ್ದರಾಮಯ್ಯ ಬಣ ಮತ್ತೊಂದು ಮಹತ್ವದ ಹೆಜ್ಜೆಯಿಟ್ಟಿದೆ.

ಅಸ್ಸಾಂ, ಕೇರಳ ಚುನಾವಣೆ ಬಳಿಕ ಮತ್ತೆ ರಾಜ್ಯದಲ್ಲಿ ಅಧಿಕಾರ ಹಸ್ತಾಂತರ ವಿಚಾರ ಸದ್ದು ಮಾಡುವ ಸೂಚನೆ ಸಿಕ್ಕಿದೆ. ಈಗಾಗಲೇ ಡಿಕೆ ಶಿವಕುಮಾರ್ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿ ಬಂದಿದ್ದಾರೆ.

ಇದರ ನಡುವೆ ನಿನ್ನೆ ಡಿಕೆ ಶಿವಕುಮಾರ್ ಬಣದಲ್ಲಿ ಗುರುತಿಸಿಕೊಂಡಿರುವ ಶಾಸಕರು ಮೇ ಎರಡನೇ  ವಾರದಲ್ಲಿ ಹೈಕಮಾಂಡ್ ಸಿಹಿ ಸುದ್ದಿ ನೀಡಲಿದೆ ಎಂದು ಹೇಳಿಕೆ ನೀಡಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಇದರ ಬೆನ್ನಲ್ಲೇ ಸಿಎಂ ಬಣ ಅಲರ್ಟ್ ಆಗಿದೆ.

ಇದೀಗ ಸಿಎಂ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿರುವ ಶಾಸಕರು ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರ ಭೇಟಿಗೆ ಮುಂದಾಗಿದ್ದಾರೆ. ಸತೀಶ್ ಜಾರಕಿಹೊಳಿ, ಮಹದೇವಪ್ಪ ಸೇರಿದಂತೆ ಘಟಾನುಘಟಿ ನಾಯಕರು ದೆಹಲಿಗೆ ತೆರಳಿದ್ದು ಸಿಎಂ ಬದಲಾವಣೆ ಮಾಡದಂತೆ ಒತ್ತಡ ಹೇರಲಿದ್ದಾರೆ ಎನ್ನಲಾಗಿದೆ. ಅಲ್ಲದೆ  ಇತ್ತೀಚೆಗೆ ಅಲ್ಪಸಂಖ್ಯಾತ ಸಮುದಾಯದ ನಾಯಕರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ಇದನ್ನು ಹಿಂಪಡೆಯುವಂತೆ ಒತ್ತಾಯಿಸಲಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಮೇ ತಿಂಗಳಿನಲ್ಲಿ ಮತ್ತೆ ರಾಜ್ಯ ರಾಜಕೀಯ ಗರಿಗೆದರುವುದು ನಿಶ್ಚಿತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments