ಜಲಸಂಪನ್ಮೂಲ ಇಲಾಖೆಗೆ ಶಾಸಕ ಗೂಳಿಹಟ್ಟಿ ಶೇಖರ್ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಇಲಾಖೆಗೆ ಗೂಳಿಹಟ್ಟಿ ಶೇಖರ್ ಪತ್ರ ಬರೆದಿರೋದು ಗೊತ್ತಿದೆ, ಗೂಳಿಹಟ್ಟಿ ಶೇಖರ್ ಅವರಿಗೂ ದಾಖಲೆ ಕೊಡಲು ಹೇಳಿದ್ದೇವೆ. ದಾಖಲೆ ಸಲ್ಲಿಸಿದ ಬಳಿಕ ಮುಂದಿನ ಕ್ರಮದ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಯಿ ತಿಳಿಸಿದರು.