ಬೆಂಗಳೂರು : ಸಚಿವ ಸ್ಥಾನ ಸಿಗದ ಕಾರಣ ಮುನಿಸಿಕೊಂಡಿರುವ ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಉಮೇಶ್ ಜಾಧವ್ ಗೆ ಬಿಜೆಪಿ ಗಾಳ ಹಾಕ್ತಿದೆ ಎನ್ನಲಾಗಿದ್ದು, ಸಂಕ್ರಾಂತಿ ನಂತರ ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಮ್ಮಿಶ್ರ ಸರ್ಕಾರ ಉಮೇಶ್ ಜಾಧವ್ ಅವರಿಗೆ, ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದ್ದರೂ ಅವರು ಈವರೆಗೂ ಅಧಿಕಾರ ಸ್ವೀಕರಿಸಿಲ್ಲ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಸಕ ಉಮೇಶ್ ಜಾಧವ್, ಎರಡು ಬಾರಿ ಆಯ್ಕೆಯಾದರೂ ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನ ನೀಡಲಿಲ್ಲ. ಇದರಿಂದ ಅಸಮಾಧಾನವಾಗಿದೆ. ಬಿಜೆಪಿಯವರು ನಿರಂತರವಾಗಿ ಸಂಪರ್ಕದಲ್ಲಿದ್ದು, ಈಗಲೇ ಎಲ್ಲವೂ ಹೇಳುವುದಿಲ್ಲ ಎಂದು ಹೇಳಿದ್ದಾರೆ.
ಅವರ ಈ ಪ್ರತಿಕ್ರಿಯೆ ಕೇಳಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುತ್ತಾರೆ ಎನ್ನಲಾಗಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.