ಬೆಂಗಳೂರು: ಎಐಸಿಸಿ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯಕ್ಕೀಡಾಗಿದ್ದು ದಿಡೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಲ್ಲಿಕಾರ್ಜುನ ಖರ್ಗೆಯವರನ್ನು ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ನಿನ್ನೆ ಅವರು ದೈನಂದಿನ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು. ಮಾಧ್ಯಮಗಳೊಂದಿಗೂ ಆರಾಮವಾಗಿಯೇ ಮಾತನಾಡಿದ್ದರು. ಉತ್ತರ ಕರ್ನಾಟಕದ ಪ್ರವಾಹ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಬಗ್ಗೆ ಪರಿಹಾರ ಒದಗಿಸಲು ಕೇಂದ್ರದ ಜೊತೆಗೂ ಮಾತುಕತೆ ನಡೆಸುವುದಾಗಿ ಹೇಳಿದ್ದರು. ಇದರ ನಡುವೆ ಅವರು ದಿಡೀರ್ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಸಮಾಧಾನಕರ ಅಂಶವೆಂದರೆ ಅವರ ಸ್ಥಿತಿ ಗಂಭೀರವಾಗಿಲ್ಲ ಎನ್ನಲಾಗಿದೆ.