Publish Date: Thu, 21 Apr 2022 (20:25 IST)
Updated Date: Thu, 21 Apr 2022 (20:28 IST)
ಹುಬ್ಬಳ್ಳಿ ನಗರದಲ್ಲಿ ಇತ್ತೀಚಿಗೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಐಎಂಐಎಂ ಮುಖಂಡ ಮೊಹಮ್ಮದ್ ಆರೀಫ್ನನ್ನು ಗುರುವಾರ ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಮುಖ ಆರೋಪಿ ಮೌಲ್ವಿ ಜತೆ ಸೇರಿ ಈತ ಪೊಲೀಸ್ ಇನ್ಸ್‌ಪೆಕ್ಟರ್ ಜತೆ ವಾಗ್ವಾದ ಮಾಡಿದ್ದ, ಗಲಭೆಗೆ ಕಾರಣವಾಗಿದ್ದ ಎಂಬ ಆರೋಪದಡಿ ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಲಭೆಗೆ ಪ್ರಚೋದನೆ ನೀಡಿದ್ದ ಮಂಟೂರ ರಸ್ತೆ ಮಿಲ್ಲತ್ ನಗರದ ಮೌಲ್ವಿ ಹೈದರಾಬಾದ್ನಲ್ಲಿ ಅವಿತುಕೊಂಡಿದ್ದಾನೆಂಬ ಮಾಹಿತಿ ಆಧರಿಸಿ ತನಿಖಾ ತಂಡ ಅಲ್ಲಿಗೂ ತೆರಳಿದೆ. ಈತ ಗಲಭೆ ದಿನ ಸಮಾಜದ ಧರ್ಮ ಗುರುಗಳು ಬರುತ್ತಿದ್ದಾರೆ. ಅಲ್ಲಿಯವರೆಗೆ ಇರುತ್ತೇನೆಂದು ಪೊಲೀಸರಿಗೆ ಸುಳ್ಳು ಹೇಳಿ ದಾರಿ ತಪ್ಪಿಸಿ ಗಲಭೆ ಮಾಡಿಸಿದ್ದ ಎಂದು ಹೇಳಲಾಗುತ್ತಿದೆ.