ಟಿಕೆಟ್ ಇದ್ದರೂ ಪ್ರಯಾಣಿಕರಿಗೆ ವಿಮಾನ ಏರಲು ನಿರಾಕರಿಸಿದ್ದಕ್ಕಾಗಿ ಏರ್ ಇಂಡಿಯಾ ಕಂಪನಿಗೆ 10 ಲಕ್ಷ ರೂ. ದಂಡ ವಿಧಿಸಲಾಗಿದೆ.
ಡೈರಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ) ಆರೋಪದ ಬಗ್ಗೆ ತನಿಖೆ ನಡೆಸಿದ ನಂತರ ಟಿಕೆಟ್ ಇದ್ದರೂ ಪ್ರಯಾಣಿಕರಿಗೆ ಅವಕಾಶ ನೀಡದೇ ಇರುವುದು ತಪ್ಪು ಎಂದು ಕಂಡು ಬಂದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಸಂಸ್ಥೆಗೆ 10 ಲಕ್ಷ ರೂ. ದಂಡ ವಿಧಿಸಲಾಗಿದೆ.
ಕೂಡಲೇ ವ್ಯವಸ್ಥೆಯನ್ನು ಸರಿಪಡಿಸಿಕೊಳ್ಳಬೇಕು. ಇಲ್ಲದಿದ್ದರೆ ಮತ್ತೆ ದಂಡ ವಿಧಿಸಬೇಕಾಗುತ್ತದೆ ಎಂದು ಡಿಜಿಸಿಎ ಎಚ್ಚರಿಕೆ ನೀಡಿದೆ.