Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತ ಸಾಧ್ಯತೆ ಕಾರಣದಿಂದ ಡಿಸೆಂಬರ್ 3 ವರೆಗೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗಲಿದೆ.
ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು ಜಿಲ್ಲೆಯಲ್ಲಿ ನ. 30ರಿಂದ ಡಿ. 3ರವರೆಗೆ ಮಳೆಯಾಗುವ ಸಂಭವವಿದೆ.
ಇದನ್ನೂ ಓದಿ: ಮಳೆನೀರು ಕೊಯ್ಲು ವ್ಯವಸ್ಥೆ ಬಳಿಕ ಸೋಲಾರ್ ಪವರ್ ಬಳಕೆ ಕುರಿತು ಬೆಂಗಳೂರು ಟೆಕಿಯ ಅಭಿಯಾನ
ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಡಿ.2ರಂದು ಹೊರತುಪಡಿಸಿ ಉಳಿದ ದಿನಗಳಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇಲ್ಲ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.