Publish Date: Sat, 15 Aug 2020 (17:29 IST)
Updated Date: Sat, 15 Aug 2020 (17:31 IST)
ಬೆಂಗಳೂರು ಗಲಭೆಯ ಕಾವು ಇನ್ನೂ ಆರಿಲ್ಲ. ಈ ನಡುವೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರ ಮೇಲಿನ ಎಲ್ಲಾ ಕೇಸ್ ಗಳನ್ನು ವಾಪಸ್ ಪಡೆಯೋ ಚರ್ಚೆ ನಡೆಯುತ್ತಿದೆ ಎನ್ನಲಾಗುತ್ತಿದೆ.
ಸಂಘಟನೆಯ ಮುಖಂಡರು, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದು, ಕೆಲವರ ಮೇಲೆ ಉದ್ದೇಶಪೂರ್ವಕವಾಗಿ ಹಾಕಲಾಗಿರುವ ಕೇಸ್ ಗಳನ್ನು ಕೈಬಿಡಬೇಕೆಂದು ಮನವಿ ಮಾಡಿದ್ದಾರೆ.
ಅನ್ಯಾಯವಾಗಿದ್ದರೆ ಅದನ್ನು ಸರಿಪಡಿಸೋ ಭರವಸೆ ನೀಡಿದ್ದೇನೆಯೇ ಹೊರತು, ವಿಶ್ವ ಹಿಂದು ಪರಿಷತ್ ಕಾರ್ಯಕರ್ತರ ಮೇಲಿನ ಎಲ್ಲಾ ಕೇಸ್ ಗಳನ್ನು ಹಿಂಪಡೆಯೋದಾಗಿ ನಾನು ಹೇಳಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.