Webdunia - Bharat's app for daily news and videos

Install App

ಎಲ್ಲಾ ಖಾಸಗಿ ಆಸ್ಪತ್ರೆಗಳು ಡಿ-ಅಡಿಕ್ಷನ್ ಕೇಂದ್ರ ತೆರೆಯಲಿ

Webdunia
ಗುರುವಾರ, 28 ಅಕ್ಟೋಬರ್ 2021 (22:18 IST)
ಡ್ರಗ್ಸ್‌ ಸೇವನೆ ವ್ಯಸನಿಗಳಾಗಿರುವ ಯುವಕರನ್ನು ಹೊರತರಲು ಎಲ್ಲಾ ಖಾಸಗಿ ಆಸ್ಪತ್ರೆಗಳು ಪ್ರತ್ಯೇಕ ಡಿ-ಅಡಿಕ್ಷನ್ ಕೇಂದ್ರವನ್ನು ತೆರೆಯಬೇಕು ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಹೇಳಿದರು.
ಫೋರ್ಟಿಸ್‌ ಆಸ್ಪತ್ರೆ ವತಿಯಿಂದ ಮೊದಲ ವ್ಯಸನ ಮುಕ್ತ ಕೇಂದ್ರ ತೆರೆಯಲಾಗಿದ್ದು, ಅದರ ಉದ್ಘಾಟನೆಯನ್ನು ಗುರುವಾರ ನೆರವೇರಿಸಿ ಮಾತನಾಡಿದ ಅವರು, ಸರ್ಕಾರ ಹಾಗೂ ಖಾಸಗಿ ಆಸ್ಪತ್ರೆಗಳ ಸಹಯೋಗದಲ್ಲಿ ಮಾದಕ ವ್ಯಸನ ಮುಕ್ತ ಕಾರ್ಯಕ್ರಮಗಳನ್ನು ಎಲ್ಲೆಡೆ ಮಾಡುವುದರಿಂದ ಈಗಾಗಲೇ ಮಾದಕ ವಸ್ತುಗಳಿಗೆ ವ್ಯಸನಿಗಳಾಗಿರುವವರನ್ನು ಹೊರತರಬಹುದು. ವಿದೇಶಗಳಿಗೆ ಹೋಲಿಸಿದರೆ ನಮ್ಮ‌ ದೇಶದಲ್ಲಿ ಡಿ-ಅಡಿಕ್ಷನ್ ಕಾರ್ಯಕ್ರಮಗಳು ಅತ್ಯಂತ ಕಡಿಮೆ. ಹೀಗಾಗಿ ವ್ಯಸನಿಗಳು ಅದರಿಂದ ಹೊರಬರಲಾಗದೇ ಕಷ್ಟ ಪಡುತ್ತಿದ್ದಾರೆ ಎಂದರು.
ಇತ್ತೀಚಿನ ದಿನಗಳಲ್ಲಿ ಡ್ರಗ್‌ ಮಾರಾಟದ ದೊಡ್ಡ ಜಾಲ ಸದ್ದಿಲ್ಲದೇ ಹರಡುತ್ತಿದ್ದು, ಅದರ ಬೇರನ್ನು ಬುಡ ಸಮೇತ ಕಿತ್ತು ಹಾಕುವ ಪ್ರಯತ್ನವನ್ನು ನಮ್ಮ ಇಲಾಖೆ ಮಾಡುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನದ ಬಳಕೆಯಿಂದ ಪೆಡ್ಲರ್‌ಗಳು ವಿದ್ಯಾರ್ಥಿಗಳನ್ನು ಸುಲಭವಾಗಿ ತಲುಪುತ್ತಿದ್ದಾರೆ. ಬೆಂಗಳೂರು ದಕ್ಷಿಣ ವಿಭಾಗದಲ್ಲಿಯೇ 450 ಕ್ಕೂ ಹೆಚ್ಚು ಡ್ರಗ್ ಸೇವಿಸುವವರನ್ನು ಪತ್ತೆ ಹಚ್ಚಿ, ದೂರು ದಾಖಲಿಸಿದ್ದೇವೆ. ಇವರನ್ನು ತಲುಪುವ ಪೆಡ್ಲರ್‌ಗಳ ಜಾಲವನ್ನು ಪತ್ತೆ ಹಚ್ಚಬೇಕು ಎಂದರು.
ಡ್ರಗ್ ಸರಬರಾಜು ಮಾಡಲು ಕಳ್ಳ ಮಾರ್ಗ ಹಿಡಿದ್ದಾರೆ. ಹೀಗಾಗಿ ಪ್ರತಿಯೊಬ್ಬ ಪೋಷಕರೇ ತಮ್ಮ‌ ಮಕ್ಕಳ ನಡವಳಿಕೆ ಮೇಲೆ ಗಮನ ಹರಿಸಬೇಕು. ಇಲ್ಲವಾದರೆ, ಡ್ರಗ್ ಜಾಲವನ್ನು ತಡೆಯಲು ಸಾಧ್ಯವಿಲ್ಲ. ವಿಪರ್ಯಾಸವೆಂದರೆ, ಪೋಷಕರಿಗೆ ತಮ್ಮ ಮಕ್ಕಳು ಡ್ರಗ್‌ ಸೇವನೆ ಮಾಡುತ್ತಿರುವ ಬಗ್ಗೆ ಮಾಹಿತಿಯೇ ಇಲ್ಲವಾಗಿದೆ ಎಂದರು. 
ಕಾರ್ಯಕ್ರಮದಲ್ಲಿ ಫೋರ್ಟಿಸ್ ಹೆಲ್ತ್‌ಕೇರ್‌ ಸಿಒಒ ಆಶೀಶ್‌ ಭಟೀಯಾ, ನ್ಯಾಷನಲ್ ಮೆಂಟಲ್ ಹೆಲ್ತ್‌ ಕಾರ್ಯಕ್ರಮದ ನಿರ್ದೇಶಕ ಡಾ. ಸಮೀರ್‌ ಪರೀಕ್,
ಫೋರ್ಟಿಸ್‌ ಆಸ್ಪತ್ರೆ ಉಪಾಧ್ಯಕ್ಷ ಡಾ. ಮನೀಶ್‌ ಮಟ್ಟು, ಮನೋತಜ್ಞ ಡಾ. ವೆಂಕಟೇಶ್ ಬಾಬು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ