ಕಲಬುರಗಿ ಮಹಾನಗರ ಪಾಲಿಕೆ ಗದ್ದುಗೆ ಹೇರಲು ಮೂರು ಪಕ್ಷಗಳು ಕಸರತ್ತು ನಡೆಸುತ್ತಿದ್ದು, ಪ್ರತಿಷ್ಠೆಯಾಗಿದೆ. ಇದೀಗ ಸಚಿವ ಆರ್.ಅಶೋಕ್ ಅಖಾಡಕ್ಕೆ ಇಳಿದಿದ್ದಾರೆ.
ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಪಡೆದಿದ್ದರೂ, ಸಂಸತ್ ಸದಸ್ಯ, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಬಲದಿಂದ ಬಿಜೆಪಿಯೂ ಸಮಾನವಾಗಿದೆ. ಜೆಡಿಎಸ್ ಕಿಂಗ್ ಮೇಕರ್ ಆಗಿದ್ದು, ಪಾಲಿಕೆ ಗುದ್ದೆಗೆ ಹೇರಲು ಜೆಡಿಎಸ್ ಬೆಂಬಲ ಅಗರ್ಯವಾಗಿದೆ.
ಇತ್ತೀಚಿಗೆ
ಜೆಡಿಎಸ್ಗೆ ಮೇಯರ್ ಸ್ಥಾನ ಬಿಟ್ಟು ಕೊಡಲು ಕಾಂಗ್ರೆಸ್ ಒಪ್ಪಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಬಿಜೆಪಿ ಪಾಳಯದಲ್ಲಿ ಆತಂಕ ಶುರುವಾಗಿದೆ. ಇದೀಗ ಸಚಿವ ಆರ್.ಅಶೋಕ್ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ.
ಬಿಡದಿಯ ಫಾರ್ಮ್ ಹೌಸ್ಗೆ ತೆರಳಿದ ಆರ್.ಅಶೋಕ್, ಮಾಜಿ ಸಿಎಂ ಎಚ್ಡಿಕೆ ಜೊತೆ ಕಲಬುರಗಿ ಪಾಲಿಕೆ ಮೈತ್ರಿ ಸಂಬಂಧ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
ಮೈತ್ರಿ ಮಾತುಕತೆಯಲ್ಲಿ ಬಿಜೆಪಿ ಯಾವ ಸೂತ್ರ ಮುಂದಿಡುತ್ತೆ ಎಂಬುದು ಇದೀಗ ಕುತೂಹಲ ಕೆರಳಿಸಿದೆ. ಕಾಂಗ್ರೆಸ್ನ ಕೆಲ ಕಾರ್ಪೊರೇಟರ್ಗಳು ಜೆಡಿಎಸ್ಗೆ ಮೇಯರ್ ಸ್ಥಾನ ಬಿಟ್ಟು ಕೊಡಲು ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆ ಜೆಡಿಎಸ್ಗೇ ಮೇಯರ್ ಸ್ಥಾನ ಬಿಟ್ಟು ಕೊಡುತ್ತಾ ಎಂಬ ಕುತೂಹಲ ಮೂಡಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಎಚ್ ಡಿ ಕೆ, ಸಚಿವ ಆರ್.ಅಶೋಕ್ ಅವರು ನನ್ನ ತೋಟದ ಮನೆಯಲ್ಲಿ ಭೇಟಿಯಾಗಿ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ನನ್ನೊಂದಿಗೆ ಸುದೀರ್ಘವಾಗಿ ಚರ್ಚಿಸಿದರು. ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಕಲಾಪದ ಬಗ್ಗೆಯೂ ಅವರು ಸಮಾಲೋಚಿಸಿದರು.
ಸೋಮವಾರ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇನೆ. ಅಲ್ಲಿ, ನಮ್ಮ ಶಾಸಕರ ಜತೆ ಎಲ್ಲ ಬೆಳವಣೆಗಗಳ ಬಗ್ಗೆ ಚರ್ಚಿಸಿದ ನಂತರ ಪಕ್ಷದ ಅಭಿಪ್ರಾಯವನ್ನು ತಿಳಿಸಲಾಗುವುದು ಎಂದು ಅವರಿಗೆ ಹೇಳಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.