ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಕೊಲೆಯಾದ ಸೌಜನ್ಯಾ ಅವರ ಮಾವ ವಿಠಲ ಗೌಡ ವಿರುದ್ಧ ಧರ್ಮಸ್ಥಳ ನಿವಾಸಿಗಳು ಗಂಭೀರ ಹೊರಿಸಿ ಎಸ್‌ಐಟಿಗೆ ದೂರು ಸಲ್ಲಿಸಿದ್ದಾರೆ.
ಬುರುಡೆ ಪ್ರಕರಣದ ತನಿಖಾ ಹಂತದಲ್ಲಿ ವಿಠಲ ಗೌಡನಿಂದ ಎಸ್ಐಟಿ ತನಿಖೆ ದಾರಿ ತಪ್ಪಿಸುತ್ತಿದ್ದಾರೆ ಎಂದು ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ಧರ್ಮಸ್ಥಳ ಗ್ರಾಮಸ್ಥ ಸಂದೀಪ್ ರೈ ದೂರು ಕೊಟ್ಟಿದ್ದಾರೆ.
ಸಾಕ್ಷ್ಯ ನಾಶ ಮಾಡಲು ಸಾರ್ವಜನಿಕವಾಗಿ ಹೇಳಿಕೆ ನೀಡಿದ ಬಗ್ಗೆಯೂ ದೂರು ನೀಡಲಾಗಿದೆ. ವಿಠಲ ಗೌಡ ವಿರುದ್ಧ ತನಿಖೆ ನಡೆಸುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರು ಸ್ವೀಕರಿಸಿರುವ ಎಸ್‌ಐಟಿ ಅಧಿಕಾರಿಗಳು ಸ್ವೀಕೃತಿ ನೀಡಿದ್ದಾರೆ.
ಎಸ್‌ಐಟಿ ವಿಚಾರಣೆ ಮುಗಿಸಿ ಹೊರಬಂದು ವಿಠಲ ಗೌಡ ವಿಡಿಯೋ ಹರಿಬಿಟ್ಟಿದ್ದಾರೆ. ಎಸ್ಐಟಿ ಯಾವುದೇ ಮಾಹಿತಿ ನೀಡದೇ ಇದ್ದರೂ ವಿಡಿಯೋ ಹರಿಬಿಟ್ಟು ತನಿಖೆ ಹಾದಿ ತಪ್ಪಿಸುತ್ತಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.
ವಿಠಲ ಗೌಡನ ಹಿಂದೆ ಕೆಲ ವ್ಯಕ್ತಿಗಳು ಸೇರಿಕೊಂಡು ಷಡ್ಯಂತ್ರ ನಡೆಸುತ್ತಿದ್ದಾರೆ. ವಿಚಾರಣೆ ಮುಗಿಸಿ ಹೊರಗೆ ಬಂದ ಬಳಿಕ ಯೂಟ್ಯೂಬ್‌ಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ಮೂಲಕ ತನಿಖೆಯ ಹಾದಿ ತಪ್ಪಿಸಲು ವಿಠಲ ಗೌಡ ಷಡ್ಯಂತ್ರ ರೂಪಿಸಿದ್ದಾರೆ ಎಂದು ದೂರಿನಲ್ಲಿ ಆರೋಪ ಮಾಡಲಾಗಿದೆ.