Select Your Language

Notifications

webdunia
webdunia
webdunia
webdunia

ಬೆಂಗ್ಳೂರಿನಲ್ಲಿ ನಾಯಿ ಮಾಂಸ ಮಾರಾಟ ಆರೋಪ: ಮಾಂಸದ ಮಾದರಿ ಸಂಗ್ರಹಿಸಿದ ಆಹಾರ ಇಲಾಖೆ

ಬೆಂಗ್ಳೂರಿನಲ್ಲಿ ನಾಯಿ ಮಾಂಸ ಮಾರಾಟ ಆರೋಪ: ಮಾಂಸದ ಮಾದರಿ ಸಂಗ್ರಹಿಸಿದ ಆಹಾರ ಇಲಾಖೆ

Sampriya

ಬೆಂಗಳೂರು , ಶನಿವಾರ, 27 ಜುಲೈ 2024 (18:20 IST)
Photo Courtesy X
ಬೆಂಗಳೂರು: ಸದ್ಯ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ನಾಯಿ ಮಾಂಸ ಮಾರಾಟ ಆರೋಪ ಪ್ರಕರಣ ಸಂಬಂಧ  ಇಂದು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಮಾಂಸದ ಮಾದರಿಗಳನ್ನು ಸಂಗ್ರಹಿಸಿದೆ.  

ಬೆಂಗಳೂರು ರೈಲು ನಿಲ್ದಾಣದಲ್ಲಿ ಭಾರೀ ಪ್ರಮಾಣದ ಮಾಂಸ ಸಾಗಾಟ ಪತ್ತೆಯಾಗಿದ್ದು, ಅದರಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು ಹಿಂದೂಪರ ಸಂಘಟನೆಯ ಪುನೀತ್ ಕೆರೆಹಳ್ಳಿ ಅವರು ಆರೋಪ ಮಾಡಿದ್ದಾರೆ. ಆದರೆ ಮಾಂಸಾ ಸಾಗಾಟ ಮಾಡಿದ ವ್ಯಾಪಾರಿ ಅಬ್ದುಲ್ ರಜಾಕ್ ಅವರು ಈ ಆರೋಪವನ್ನು ತಳ್ಳಿ ಹಾಕಿದ್ದು, ಇದು ಕುರಿ ಮಾಂಸ ಎಂದು ಹೇಳಿದ್ದಾರೆ.

ಈ ಪ್ರಕರಣ ಸಂಬಂಧ ಇದೀಗ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಪಾರ್ಸೆಗಳಲ್ಲಿ ಪತ್ತೆಯಾದ ಪ್ರಾಣಿಗಳ ಮಾಂಸದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿದೆ. ಇದರ ವರದಿಯಲ್ಲಿ ಸತ್ಯಾಂಶ ಹೊರಬೀಳಲಿದೆ. ಇನ್ನೂ ಪ್ರಕರಣದ ಸಂಬಂಧ ವರಧಿ ಬಂದ್ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು  ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಕಮಿಷನರೇಟ್ ತಿಳಿಸಿದೆ.

ಪ್ರಕರಣದ ಹಿನ್ನೆಲೆ: ಶುಕ್ರವಾರ ರಾತ್ರಿ ಜೈಪುರದಿಂದ ಬೆಂಗಳೂರಿಗೆ ರೈಲಿನ ಮೂಲಕ ಬಂದ ಮೂರು ಟನ್ ತೂಕದ ಮಾಂಸದಲ್ಲಿ ನಾಯಿ ಮಾಂಸವನ್ನು ಹಾಕಿ ಸಾಗಾಟ ಮಾಡಲಾಗುತ್ತಿದೆ ಎಂದು ಪುನೀತ್ ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ಕೆಲವು ಹಿಂದೂಪರ ಕಾರ್ಯಕರ್ತರು ಗಂಭೀರ ಆರೋಪ ಮಾಡಿದ್ದರು.



Share this Story:

Follow Webdunia kannada

ಮುಂದಿನ ಸುದ್ದಿ

ಮುಂಬೈನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಮೂವರು ಸಾವು, ಹಲವರಿಗೆ ಗಾಯ