ಬೆಂಗಳೂರು: ಬಿಜೆಪಿ- ಜೆಡಿಎಸ್ ಮೈತ್ರಿ ಅಸಮಾಧಾನದಿಂದ ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಜೀರ್ ಅವರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾದರು.
ಉಪಮುಖ್ಯಮಂತ್ರಿ ಡಿ.ಕೆ.ಸುರೇಶ್ ಅವರು ಕಾಂಗ್ರೆಸ್‌ನ ಶಾಲನ್ನು ಹಾಕುವ ಮೂಲಕ ನಜ್ಮಾ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಿದರು.
ನಜ್ಮಾ ಅವರು 2020ರಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಸಮ್ಮುಖದಲ್ಲಿ ತುಮಕೂರು ಜಿಲ್ಲೆ ಶಿರಾ ಪಟ್ಟಣದಲ್ಲಿ ಅವರು ಜಾತ್ಯತೀತ ಜನತಾ ದಳ ಪಕ್ಷವನ್ನು ಅವರು ಸೇರ್ಪಡೆಗೊಂಡಿದ್ದರು.
ನಜ್ಮಾ ನಜೀರ್ ಅವರು ಕಳೆದ ನಾಲ್ಕೈದು ವರ್ಷಗಳಿಂದ ದಮನಿತರ ಧ್ವನಿಯಾಗಿ ಸಾಮಾಜಿಕ ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿದ್ದಾರೆ. ಈ ಹಿಂದೆ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಎನ್‌ಸಿಆರ್, ಸಿಐಎ ವಿರೋಧಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ನಜ್ಮಾ ನಜೀರ್ ಅವರು ಮೂಲತಃ ಪಿರಿಯಾಪಟ್ಟಣದವರಾಗಿದ್ದಾರೆ.