Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರಿನ ಕಂಠೀರವ ಸ್ಟುಡಿಯೋ ಆವರಣದಲ್ಲಿ ಅಂಬಿ ಸ್ಮಾರಕ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾ ಯಿ ಭೂಮಿ ಪೂಜೆ ಮಾಡಿದ್ದಾರೆ. ಸಂಸದೆ, ಅಂಬಿ ಪತ್ನಿ ಸುಮಲತಾ ಅಂಬರೀಷ್ ನಟ ದೊಡ್ಡಣ್ಣ, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಸಚಿವರಾದ ಕೆ
ಗೋಪಾಲಯ್ಯ, ಎಸ್ ಟಿ ಸೋಮಶೇಖರ್, ಡಾ. ಅಶ್ವಥ್ ನಾರಾಯಣ್, ಆರ್. ಅಶೋಕ್ ಮೊದಲಾದವರು ಈ ಕಾರ್ಯ ಕ್ರಮದಲ್ಲಿ ಉಪಸ್ಥಿತರಿದ್ದರು. ಸ್ನೇಹಕ್ಕಾಗಿ ಅಂಬರೀಷ್ ಏನೂ ಬೇಕಾದರೂ ಮಾಡುತ್ತಿದ್ದರು. ಕರ್ನಾಟಕದ ಅಭಿವೃದ್ಧಿಯ ಕುರಿತು ಅನೇಕ ಕನಸು ಕಂಡಿದ್ದರು. ಆದರೆ, ಅಧಿಕಾರಕ್ಕೆ ಅವರು ಎಂದೂ ಅಂಟಿಕೊಳ್ಳಲಿಲ್ಲ. ಕಾವೇರಿ ಹೋರಾಟದಲ್ಲಿ ಅಧಿಕಾರ ತ್ಯಾಗ ಮಾಡಿದ ಏಕೈಕ ವ್ಯಕ್ತಿ ಅಂಬರೀಷ್ ಎಂದು ಬೊಮ್ಮಾಯಿ ಅಂಬರೀಶ್ ಅವರನ್ನು ಸ್ಮರಿಸಿದ್ದಾರೆ.