ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರ ಹಿಡಯಬೇಕು ಎಂದು ಹಠತೊಟ್ಟಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯ ನಾಯಕರಿಗೆ ಚಳಿ ಬಿಡಿಸಿದ್ದಾರೆ.
ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಅವರು ಬೆಂಗಳೂರಿನಲ್ಲಿ ನಡೆಸಿದ ಸಭೆಯಲ್ಲಿ ಬಿಜೆಪಿಯ ನಾಯಕರಿಗೆ ಬಿಸಿ ಮುಟ್ಟಿಸಿರುವ ಅವರು, ಸೂಚನೆ ಎಂದು ಭಾವಿಸದೆ ಜವಾಬ್ದಾರಿ ಎಂದು ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ.
ಈ ಬಾರಿ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಸಮೀಕ್ಷೆಗಳ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳಬೇಡಿ. ಮಾರ್ಚ್ 10ರೊಳಗೆ ಚುನಾವಣೆಗೆ ಸಿದ್ಧತೆ ಪೂರ್ಣಗೊಳಿಸಬೇಕು. ಅದಕ್ಕಾಗಿ 23 ಸೂತ್ರಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ವಾಸ್ತವ್ಯ ಸಹಿತ ಪ್ರವಾಸ, ಮತಗಟ್ಟೆಯಲ್ಲಿ ಪ್ರಮುಖರ ನೇಮಕ, ವಿಸ್ತೃತ ಸಭೆ, ಮತಗಟ್ಟೆಯ ಸಶಕ್ತಿಕರಣ, ಸದಸ್ಯತ್ವ ಮಾಡಿಸುವುದು, ಮಠ ಮಂದಿರದ ಪ್ರಮುಖರೊಂದಿಗೆ ಚರ್ಚೆ ನಡೆಸಬೇಕು. ಗೋಡೆ ಬರಹ ಬರೆಸುವುದು, ಪ್ರಣಾಳಿಕೆ, ಜಾರ್ಜ್ ಶೀಟ್, ವಾಟ್ಸಾಪ್ ಗ್ರೂಪ್, ಕ್ಷೇತ್ರ ವ್ಯಾಪ್ತಿಯಲ್ಲಿ ಕೋರ್ ಕಮಿಟಿ ರಚನೆ, ಬೂತ್ ಅಧ್ಯಕ್ಷರ ಮನೆ ಮೇಲೆ ಪಕ್ಷದ ಧ್ವಜ ಸೇರಿದಂತೆ 23 ಸೂತ್ರಗಳನ್ನು ಅಳವಡಿಸಿಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.