ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಒಬ್ಬ ಕೊಲೆ ಆರೋಪಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಧಾನಿ ಆಗದಿದ್ರೆ, ಅಮಿತ್ ಶಾ ಜೈಲಿನಲ್ಲಿರಬೇಕಿತ್ತು. ಸಿಬಿಐನವರು ಅನುಕೂಲ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಅವರು ಹೋರಗಿದ್ದಾರೆ. ಅವರಿಗೆ ನಮ್ಮ ಸರಕಾರದ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ ಎಂದು ಕಿಡಿಕಾರಿದರು.
ಭ್ರಷ್ಟರು ನೋಟು ಮುದ್ರಣ ಮಾಡುವ ಯಂತ್ರವನ್ನು ಮನೆಯಲ್ಲಿಯೇ ಇಟ್ಟುಕೊಂಡಿದ್ದಾರೆ. ನಮ್ಮ ಸರಕಾರದ ವಿರುದ್ಧ ಮಾತನಾಡುವ ಅಮಿತ್ ಶಾಗೆ ಏನು ಹೇಳುವುದು ಎಂದು ಪ್ರಶ್ನಿಸಿದರು.
ಮಹದಾಯಿ ಹಾಗೂ ಕಾವೇರಿ ನದಿ ನೀರು ಹಂಚಿಕೆ ವಿವಾದವನ್ನು ಕೇವಲ 4 ಗಂಟೆಯಲ್ಲಿ ಬಗೆಹರಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಎಡಿಯೂರಪ್ಪ ಹೇಳಿದ್ದರು. ಇದೀಗ ಕೇಂದ್ರದಲ್ಲಿ ಅವರದ್ದೆ ಸರಕಾರವಿದೆ. ಆದರೂ ಸಹ ಅಂತರರಾಜ್ಯ ನದಿ ವಿವಾದವನ್ನು ಬೆಗೆಹರಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು
ಪ್ರಧಾನಿ ಮೋದಿ ಅವರ ಜನಪ್ರಿಯತೆ ಕುಗ್ಗುತ್ತಿದೆ. ಮುಂದಿನ ಚುನಾವಣೆಯಲ್ಲಿ ಅವರು ಹೀನಾಯ ಸೋಲು ಅನುಭವಿಸುವುದು ಶತಸಿದ್ಧ. ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ