Select Your Language

Notifications

webdunia
webdunia
webdunia
webdunia

ಪುತ್ತೂರಿಗೆ ಅಮಿತ್ ಶಾ ಆಗಮನ : ಯಾವ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ?

ರಾಜ್ಯ ಪ್ರವೇಶ
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು, ತುಮಕೂರಿಗೆ ಬಂದು ಹೋದ ಬೆನ್ನಲ್ಲೇ ಕೇಂದ್ರ ಸಹಕಾರಿ ಸಚಿವ ಅಮಿತ್ ಶಾ ರಾಜ್ಯ ಪ್ರವೇಶಕ್ಕೆ ಮುಹೂರ್ತ ನಿಗದಿಯಾಗಿದೆ.
 
ಫೆಬ್ರವರಿ 11ರಂದು ಅಮಿತ್ ಶಾ ಅವರ ಒಂದು ದಿನದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪ್ರವಾಸದ ಪಟ್ಟಿ ಪ್ರಕಟವಾಗಿದೆ. ಕಣ್ಣೂರು ವಿಮಾನ ನಿಲ್ದಾಣದಿಂದ ಬಿಎಸ್ಎಫ್ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 2:45 ಈಶ್ವರಮಂಗಲಕ್ಕೆ ಆಗಮಿಸಲಿದ್ದಾರೆ.

ರಸ್ತೆಯ ಮಾರ್ಗದ ಮೂಲಕ ಹನುಮಗಿರಿ ದೇವಸ್ಥಾನಕ್ಕೆ ಆಗಮಿಸಲಿರುವ ಇವರು ನಂತರ ಪುತ್ತೂರಿಗೆ ಹೆಲಿಕಾಪ್ಟರ್ ಮೂಲಕ ತೆರಳಲಿದ್ದಾರೆ. ಸಂಜೆ ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಮಾರಂಭದಲ್ಲಿ ಭಾಗವಹಿಸಿ ಭಾಷಣ ಮಾಡಲಿದ್ದಾರೆ. ಈ ಸಹಕಾರಿ ಸಮಾವೇಶವು ತೆಂಕಿಲದ ವಿವೇಕಾನಂದ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನ ವಧು, ವರರ ನಯಾ ಟ್ರೆಂಡ್ : ಏನಿದು ಮ್ಯಾರೇಜ್ ಕಂಡೀಷನ್?